1. Home
  2. Job
  3. Openings
  4. 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ – 1:2 ಪಟ್ಟಿಯ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ..

15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ – 1:2 ಪಟ್ಟಿಯ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ..

15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ – 1:2 ಪಟ್ಟಿಯ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ..
0

ನ್ಯೂಸ್ ಆ್ಯರೋ : 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:2 ಪರಿಶೀಲನಾ ಪಟ್ಟಿಯಲ್ಲಿನ ಅಭ್ಯರ್ಥಿಗಳು ಮೂಲದಾಖಲೆಗಳ ಪರಿಶೀಲನೆಗೆ ನಿಗದಿತ ದಿನಾಂಕದೊಳಗೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ‌ ನೀಡಿದೆ.

ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ-2022ಕ್ಕೆ ಸಂಬಂಧಿಸಿದಂತೆ 1:2 ಪರಿಶೀಲನಾ ಪಟ್ಟಿಯನ್ನು ಇಲಾಖಾ ವೆಬ್ ಸೈಟ್ ನಲ್ಲಿ ( Website ) ಪ್ರಕಟಿಸಲಾಗಿದೆ ಎಂದಿದ್ದಾರೆ.

ಪ್ರಕಟಿತ ಪಟ್ಟಿಗಳಲ್ಲಿ ಪರಿಗಣಿಸಲ್ಪಟ್ಟಿರುವ ಅಭ್ಯರ್ಥಿಗಳ ಮೂಲದಾಖಲೆಗಳ ಪರಿಶೀಲನೆಯನ್ನು ಆಯಾ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರದವರ ಕಚೇರಿಗಳಲ್ಲಿ ದಿನಾಂಕ 06-10-2022ರಿಂದ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಅಭ್ಯರ್ಥಿಗಳು ಇಲಾಖೆಯಿಂದ ಸೂಚಿಸಿರುವಸೂಚನೆಗಳನ್ನು ಪಾಲಿಸಿ, ಮೂಲದಾಖಲೆಗಳ ಪರಿಶೀಲನೆಗೆ ಹಾಜರಾಗುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ ಸೈಟ್ http://schooleducation.kar.nic. in ತಾಣಕ್ಕೆ ಭೇಟಿ ನೀಡುವಂತೆ ಪ್ರಕಟಣೆ ಹೊರಡಿಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..