1. Home
  2. Job
  3. Openings
  4. ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿಗೆ ಅರ್ಜಿ ಆಹ್ವಾನ – ಪಿಯುಸಿ ಆದವರು ಅರ್ಜಿ ಸಲ್ಲಿಸಬಹುದು

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿಗೆ ಅರ್ಜಿ ಆಹ್ವಾನ – ಪಿಯುಸಿ ಆದವರು ಅರ್ಜಿ ಸಲ್ಲಿಸಬಹುದು

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿಗೆ ಅರ್ಜಿ ಆಹ್ವಾನ – ಪಿಯುಸಿ ಆದವರು ಅರ್ಜಿ ಸಲ್ಲಿಸಬಹುದು
0

ನ್ಯೂಸ್ ಆ್ಯರೋ : ಕರ್ನಾಟಕ ಪೊಲೀಸ್​ ಇಲಾಖೆ 1,137 ಸಿವಿಲ್​ ಪೊಲೀಸ್​ ಕಾನ್ಸ್​ಸ್ಟೇಬಲ್​ಗಳ ಹುದ್ದೆ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಗೆಜೆಟ್‌ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಅಕ್ಟೋಬರ್ 20 ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸ್ವೀಕಾರ ಆರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ನವೆಂಬರ್​ 11, 2022ರ ಒಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು 1,137 ಸಿವಿಲ್​ ಪೊಲೀಸ್​ ಕಾನ್ಸ್​ಸ್ಟೇಬಲ್​ಗಳ ಹುದ್ದೆಗಳು ಖಾಲಿ ಇದ್ದು, ಪುರುಷ ಅಭ್ಯರ್ಥಿಗಳಿಗೆ 817 ಹುದ್ದೆಗಳನ್ನು, ಮಹಿಳಾ ಅಭ್ಯರ್ಥಿಗಳಿಗೆ 286 ಹುದ್ದೆಗಳು ಹಾಗೇ ತೃತೀಯ ಲಿಂಗಿಗಳಿಗೆ 34 ಹುದ್ದೆಗಳನ್ನು ಮೀಸಲಿಡಲಾಗಿದೆ.

ವಯೋಮಿತಿ

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಆಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 27 ವರ್ಷ. ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷ ಹಾಗೇ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ ವಯೋಮಿತಿಗೆ ಒಳಪಟ್ಟಿರಬೇಕು.

ಶುಲ್ಕ:

ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿ ನಿರ್ದಿಷ್ಟ ಪ್ರವೇಶಾತಿ ಶುಲ್ಕವನ್ನು ನಿಗದಿ ಮಾಡಿದ್ದು, ಸಾಮಾನ್ಯ ವರ್ಗ ಮತ್ತು ಒಬಿಸಿ ಅಭ್ಯರ್ಥಿಗಳಿಗೆ – 400 ರೂ. ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಮತ್ತು ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳು 200 ರೂ. ಪಾವತಿಸಬೇಕು.
ಕೆನರಾ ಬ್ಯಾಂಕ್​ ಅಥವಾ ಅಂಚೆ ಕಚೇರಿಗಳ ಮೂಲಕ ಶುಲ್ಕ ಪಾವತಿಸಬಹುದು.

ವಿದ್ಯಾರ್ಹತೆ:

ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ

ವೇತನ ಶ್ರೇಣಿ:

ಆರಂಭಿಕ ವೇತನ: 23,500 ರೂ. ಗರಿಷ್ಠ ವೇತನ: 47,650 ರೂ.

ಆಯ್ಕೆ ಪ್ರಕ್ರಿಯೆ:

ಆರಂಭದಲ್ಲಿ ಲಿಖಿತ ಪರೀಕ್ಷೆ: ಲಿಖಿತ ಪರೀಕ್ಷೆಯ ಬಳಿಕ 1:5 ಅನುಪಾತದಲ್ಲಿ ದೈಹಿಕ ಪರೀಕ್ಷೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾಗಿರುವ ವೆಬ್​ಸೈಟ್​: https://ksp-recruitment.in/

ಇನ್ನೂ ಅಕ್ಟೋಬರ್​ 20, 2022 ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ನವೆಂಬರ್​ 11, 2022 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಶುಲ್ಕ ಪಾವತಿಗೆ ನವೆಂಬರ್​ 23, 2022 ಲಾಸ್ಟ್ ಡೇಟ್ ಆಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..