1. Home
  2. Job
  3. Openings
  4. ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ – 20 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು..

ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ – 20 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು..

ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ – 20 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು..
0

ನ್ಯೂಸ್ ಆ್ಯರೋ : ITBPಯ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ITBP ವೆಬ್‌ಸೈಟ್ recruitment.itbpolice.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಪುರುಷರಿಗೆ 20 ಹಾಗೂ ಮಹಿಳೆಯರಿಗೆ 3 ಹುದ್ದೆಗಳು ಸೇರಿದಂತೆ ಒಟ್ಟು 23 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮನೋವಿಜ್ಞಾನದಲ್ಲಿ ಪದವಿ ಪಡೆದಿರಬೇಕು. ಅಲ್ಲದೆ ಬಿ.ಎಡ್ ಸಹ ಮಾಡಿರಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 25 ವರ್ಷಗಳನ್ನು ನಿಗದಿ ಮಾಡಲಾಗಿದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 25 ಸಾವಿರದಿಂದ 81,100 ರೂ.ವರೆಗೆ ವೇತನ ನಿಗದಿ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಹೀಗಿದೆ:

  • ದೈಹಿಕ ದಕ್ಷತೆ ಪರೀಕ್ಷೆ
  • ದೈಹಿಕ ಗುಣಮಟ್ಟದ ಪರೀಕ್ಷೆ
  • ಲಿಖಿತ ಪರೀಕ್ಷೆ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಈ ಮೇಲಿನ ಪರೀಕ್ಷೆಗಳ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳಿಗೆ– 100 ರೂ.

ಮಹಿಳೆಯರು, SC ಮತ್ತು ST ವರ್ಗದ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕ:

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ- ಅಕ್ಟೋಬರ್ 13, 2022
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ನವೆಂಬರ್ 11, 2022
News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..