1. Home
  2. Job
  3. Openings
  4. ರಾಜ್ಯ ವಿಮಾ ನಿಗಮದ ಹುದ್ದೆಗಳಿಗೆ ಅರ್ಜಿ ಆಹ್ವಾನ – ತಿಂಗಳ ವೇತನ 67 ಸಾವಿರ ರೂಪಾಯಿ

ರಾಜ್ಯ ವಿಮಾ ನಿಗಮದ ಹುದ್ದೆಗಳಿಗೆ ಅರ್ಜಿ ಆಹ್ವಾನ – ತಿಂಗಳ ವೇತನ 67 ಸಾವಿರ ರೂಪಾಯಿ

ರಾಜ್ಯ ವಿಮಾ ನಿಗಮದ ಹುದ್ದೆಗಳಿಗೆ ಅರ್ಜಿ ಆಹ್ವಾನ – ತಿಂಗಳ ವೇತನ 67 ಸಾವಿರ ರೂಪಾಯಿ
0

ನ್ಯೂಸ್ ಆ್ಯರೋ‌ : ಉದ್ಯೋಗಿಗಳ ರಾಜ್ಯ ವಿಮಾ ನಿಗಮ (ESIC) ಸ್ಪೆಷಲಿಸ್ಟ್ ಗ್ರೇಡ್ 2 ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 11 ರಂದು ನಡೆಯಲಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಒಟ್ಟು 9 ಹುದ್ದೆಗಳ ಭರ್ತಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯಗಳಿಂದ ಎಮರ್ಜೆನ್ಸಿ ಮೆಡಿಸಿನ್ /ಅನೆಸ್ತೇಶಿಯಾ/ರೆಸ್ಪಿರೇಟರಿ ಮೆಡಿಸಿನ್, ಆರ್ಥೋಪೆಡಿಕ್ಸ್, ಜನರಲ್ ಸರ್ಜರಿಯಲ್ಲಿ ಎಂಎಸ್, ಡಿಎನ್ಬಿ ನಲ್ಲಿ ಎಂಡಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಸಂದರ್ಶದಲ್ಲಿ ಭಾಗವಹಿಸಬಹುದು.

ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಮ್ಯಾಟ್ರಿಕ್ಸ್ ಲೆವೆಲ್ 11 ರ ಅಡಿಯಲ್ಲಿ ತಿಂಗಳಿಗೆ ₹ 67,700 ಆರಂಭಿಕ ವೇತನವನ್ನು ನೀಡಲಾಗುತ್ತದೆ.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷಗಳು ಎಂದು ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ ಹೇಗೆ?

ಕಾರ್ಮಿಕರ ರಾಜ್ಯ ವಿಮಾ ನಿಗಮದ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಸಂದರ್ಶನಕ್ಕೆ ಈ ದಾಖಲೆಗಳು ಅಗತ್ಯ

ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಅಭ್ಯರ್ಥಿಗಳು 2 ಪಾಸ್ ಪೋರ್ಟ್ ಸೈಜ್ ಫೋಟೋ, ವಯಸ್ಸಿನ ದೃಢೀಕರಣ, ಶೈಕ್ಷಣಿಕ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಹಾಗೆಯೇ ಜಾತಿ ಮತ್ತು ಮೀಸಲಾತಿ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ಹೋಗಬೇಕು.

ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 11, 2022 ರಂದು ಸಂದರ್ಶನ ನಡೆಯುವ ಸ್ಥಳ Academic Block, ESIC MC and PGIMSR, Rajaji Nagar, Bangalore, Karnataka ಕ್ಕೆ ಭೇಟಿ ನೀಡಬಹುದು.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..