ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ – ಮಾಸಿಕ ₹ 50 ಸಾವಿರದಿಂದ ₹ 1.60 ಲಕ್ಷ ತನಕ ವೇತನ : ವಿವರ ಇಲ್ಲಿವೆ..

ನ್ಯೂಸ್ ಆ್ಯರೋ : ಮಂಗಳೂರಿನ ಬೈಕಂಪಾಡಿಯಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನಲ್ಲಿ (ಎಂಆರ್‌ಪಿಎಲ್) ಖಾಲಿ ಇರುವ 95 ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯನ್ನು ಹುಡುಕುತ್ತಿರುವ ಕರಾವಳಿಯ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 2023ರ ಜನವರಿ 15 ರ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಮಂಗಳೂರು ಉದ್ಯೋಗದ ಕಾರ್ಯ ಸ್ಥಾನವಾಗಿದ್ದು, ಮಾಸಿಕ ₹ 50,000 ರಿಂದ ₹ 1,60,000 ತನಕ ವೇತನವಿದೆ.
95 ಹುದ್ದೆಗಳ ವಿವರ:
- ಸಹಾಯಕ ಕಾರ್ಯನಿರ್ವಾಹಕ (ಹಣಕಾಸು/ ಆಂತರಿಕ ಲೆಕ್ಕಪರಿಶೋಧನೆ)– 4
- ಸಹಾಯಕ ಕಾರ್ಯನಿರ್ವಾಹಕ (ಕಾರ್ಯದರ್ಶಿ)– 1
- ಸಹಾಯಕ ಕಾರ್ಯನಿರ್ವಾಹಕ ಯುಜಿಸಿ (ಮಾರ್ಕೆಟಿಂಗ್)– 12
- ಸಹಾಯಕ ಕಾರ್ಯನಿರ್ವಾಹಕ (ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ)–1
- ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ (ರಾಸಾಯನಿಕ)–28
- ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ (ಮೆಕ್ಯಾನಿಕಲ್)–24
- ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ (ಸಿವಿಲ್)–2
- ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ (ಎಲೆಕ್ಟ್ರಿಕಲ್)–7
- ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ (ಇನ್ಸ್ಟ್ರುಮೆಂಟೇಶನ್)–11
- ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ (ಕಂಪ್ಯೂಟರ್ ಸೈನ್ಸ್)–5
- ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ (ರಸಾಯನಶಾಸ್ತ್ರ)–1
ವಿದ್ಯಾರ್ಹತೆ:
ಎಂಆರ್‌ಪಿಎಲ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಸಿಎ, ಐಸಿಎಐ, ಸಿಎಂಅ, ಬಿಎಸ್ಸಿ, ಬಿಇ, ಬಿಟೆಕ್, ಎಂಬಿಎ, ಸ್ನಾತಕೋತ್ತರ ಡಿಪ್ಲೊಮಾ, ಸ್ನಾತಕೋತ್ತರ ಪದವಿ, ಎಂಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯಸ್ಸು ಜನವರಿ 15, 2023ಕ್ಕೆ 27 ವರ್ಷ ಮೀರಿರಬಾರದು. ಹಿಂದುಳಿದ ವರ್ಗದವರಿಗೆ 3 ವರ್ಷ ಸಡಿಲಿಕೆ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ, ಹಿಂದುಳಿದ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹ 118 ಅರ್ಜಿ ಶುಲ್ಕ ನಿಗದಿಯಾಗಿದೆ. ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಮತ್ತು ಮಾಜಿ ಸೈನಿಕರಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಅಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿವರ:
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ https://www.mrpl.co.in/careers ಗೆ ಲಾಗಿನ್ ಆಗಿ..