ಮಂಗಳೂರಿನಲ್ಲಿ ಗೂಗಲ್ ಪೇ ಕಂಪನಿಯಲ್ಲಿದೆ ಉದ್ಯೋಗಾವಕಾಶ – ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ…

ನ್ಯೂಸ್ ಆ್ಯರೋ : ನೀವು ಜಾಬ್ ಹುಡುಕುತ್ತಿದ್ದೀರಾ? ಹಾಗಿದ್ರೆ ಗಮನಿಸಿ. ಪ್ರತಿಷ್ಠಿತ ಗೂಗಲ್ ಪೇ ಕಂಪನಿಯಲ್ಲಿ ಉದ್ಯೋಗಾವಕಾಶವಿದೆ. ಮೊಬೈಲ್ ಪೇಮೆಂಟ್ ಸರ್ವೀಸ್ ಆ್ಯಪ್ ಗೂಗಲ್ ಪೇ ಪ್ರೈವೇಟ್ ಲಿಮಿಟೆಡ್’ನಲ್ಲಿ ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್ಸ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಪಿಯುಸಿ ಪಾಸ್ ಆಗಿದ್ದರೆ ಸಾಕು, ನೀವು ಈ ಉದ್ಯೋಗವನ್ನು ಪಡೆಯಬಹುದು.
ಗೂಗಲ್ ಪೇ ಪ್ರೈವೇಟ್ ಲಿಮಿಟೆಡ್’ನ ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್ಸ್ ಆಗಿ ಆಯ್ಕೆಯಾಗುವ ಅಭ್ಯರ್ಥಿ ಗೂಗಲ್ ಪೇ ಕ್ಯೂಆರ್ ಕೋಡ್ ಕುರಿತಾಗಿ ಫೀಲ್ಡ್ ಮಾರ್ಕೆಟಿಂಗ್ ಮಾಡಬೇಕಾಗುತ್ತದೆ ಹಾಗೂ ಗೂಗಲ್ ಪೇ ಗ್ರಾಹಕರಿಗೆ ಯಾವುದೇ ಸಮಸ್ಯೆಗಳು ಎದುರಾದರೆ, ಕೂಡಲೇ ಅವರನ್ನು ಭೇಟಿಯಾಗಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಮಂಗಳೂರಿನಲ್ಲಿ ಕೆಲಸ ನಿರ್ವಹಿಸಲು ತಯಾರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಗೂಗಲ್ ಪೇ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ/12ನೇ ತರಗತಿ ತೇರ್ಗಡೆ ಹೊಂದಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹18,000 ವೇತನ ನೀಡಲಾಗುತ್ತದೆ. ಜೊತೆಗೆ 12,000ದ ವರೆಗೆ ಇನ್ಸೆಂಟಿವ್ ಕೂಡ ಕೊಡಲಾಗುತ್ತದೆ.
ಇನ್ನು ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ. ಗೂಗಲ್ ಪೇ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವವವರು ಹೆಚ್ಚಿನ ಮಾಹಿತಿಗೆ ಮೊಬೈಲ್ ನಂಬರ್ 8088054341ಗೆ ಕರೆ ಮಾಡಬಹುದು.