ಕೆಎಂಎಫ್‌ನಿಂದ 487 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ – SSLC, ಐಟಿಐ, ಡಿಪ್ಲೊಮಾ, ಪದವೀಧರರೂ ಅರ್ಜಿ ಸಲ್ಲಿಸಬಹುದು..!!

ನ್ಯೂಸ್ ಆ್ಯರೋ : ಕರ್ನಾಟಕ ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ನವೆಂಬರ್ 19 ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಪಾಸಾದ ಎಲ್ಲ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶವಿದ್ದು, ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು 487 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ವಿದ್ಯಾರ್ಹತೆ :
ಎಸ್‌ಎಸ್‌ಎಲ್‌ಸಿ/ ಐಟಿಐ / ಡಿಪ್ಲೊಮ / ಡಿಗ್ರಿ ಪಾಸ್ ಮಾಡಿರಬೇಕು ಹಾಗೂ ಉನ್ನತ ಮಟ್ಟದ ಹುದ್ದೆಗಳಿಗೆ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿಇ ಅಥವಾ ಐಸಿಡಬ್ಯೂಎ, ಎಂವಿಎಸ್ಸಿ, ಸ್ನಾತಕೋತ್ತರ ಪದವಿ, ಎಂಬಿಎ, ಎಂಬಿಬಿಎಸ್, ಬಿಎಸ್ಸಿ, ಎಂಟೆಕ್ ಅನ್ನು ಪೂರ್ಣಗೊಳಿಸಿರಬೇಕು. ವಿದ್ಯಾರ್ಹತೆ ಜೊತೆಗೆ, ಕನಿಷ್ಠ ಕಾರ್ಯಾನುಭವಗಳನ್ನು ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ನಿಗದಿಯ ವಯೋಮಿತಿ ಇದ್ದು, ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ಒಳಪಟ್ಟಿರಬೇಕು.
ಪ.ಜಾ, ಪ.ಪಂ ಅಭರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಿದ್ದು, ಪ.ಜಾ, ಪ.ಪಂ ಮತ್ತು ಪ್ರವರ್ಗ- 1 ಅಭ್ಯರ್ಥಿಗಳಿಗೆ 05 ವರ್ಷಗಳು
ಹಾಗೂ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 03 ವರ್ಷಗಳನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.500. ನಿಗದಿ ಪಡಿಸಿದ್ದು, ಇತರೆ ವರ್ಗದ ಅಭ್ಯರ್ಥಿಗಳು 1000. ರೂ. ಶುಲ್ಕ ಪಾವತಿಸಬೇಕಿದೆ
ಇನ್ನೂ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ನವೆಂಬರ್ 19ರ ಒಳಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಿದೆ. ಈ ಹುದ್ದೆಗಳಿಗೆ ಮೀಸಲಾತಿ, ವಿದ್ಯಾರ್ಹತೆ, ವಯೋಮಿತಿ, ಇತರೆ ಹೆಚ್ಚಿನ ಮಾಹಿತಿಗಾಗಿ https://www.kmfnandini.coop/ ಈ ಲಿಂಕ್ ಕ್ಲಿಕ್ ಮಾಡಿ.