ನ್ಯೂಸ್ ಆ್ಯರೋ : ನೆಲ್ಯಾಡಿಯ ಕಾನ್ವೆಂಟ್‌ಗೆ ಅಕ್ರಮವಾಗಿ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಬಂಧಿಸಿದ್ದಾರೆ.
ಕಡಬ ತಾಲೂಕಿನ ಪೇರಡ್ಕ ನಿವಾಸಿಗಳಾದ ಸದಾಂ ಹಾಗೂ ಇಸ್ಮಾಯಿಲ್ ಬಂಧಿತ ಆರೋಪಿಗಳಾಗಿದ್ದಾರೆ.
ಇವರು ಕಳೆದ ಸೆ.27 ರಂದು ಸಂಜೆ ನೆಲ್ಯಾಡಿಯಲ್ಲಿರುವ ಬೆಥನಿ ಕಾನ್ವೆಂಟ್‌ಗೆ ಅಕ್ರಮವಾಗಿ ಪ್ರವೇಶ ಮಾಡಿದ್ದು ಈ ಬಗ್ಗೆ ಅಲ್ಲಿನ ಸಿಸ್ಟರ್ ಪರಿಮಳರವರು, ಈ ಸಮಯಕ್ಕೆ ನೀವು ಇಲ್ಲಿಗೆ ಯಾಕೆ ಬಂದಿದ್ದೀರಿ ಎಂದು ಕೇಳಿದಾಗ ಇದನ್ನು ಕೇಳಲು ನೀನು ಯಾರು, ನಾವು ಯಾವಾಗ ಬೇಕಾದರೂ ಬರುತ್ತೇವೆ ಎಂಬುದಾಗಿ ಹೇಳಿ ಅವಾಚ್ಯವಾಗಿ ಬೈದಿದ್ದಾರೆ.
ಇದೇ ವೇಳೆ ಚರ್ಚ್‌ನಲ್ಲಿ ಸಭೆ ನಡೆಯುತ್ತಿದ್ದು, ಇವರ ಬೊಬ್ಬೆ ಕೇಳಿ ಸೋನು ಜಾರ್ಜ್ ಎಂಬವರು ಅಲ್ಲಿಗೆ ಬಂದಾಗ ಆರೋಪಿಗಳು ಅವರ ಮೇಲೆ ಹಲ್ಲೆ ಮಾಡಲು ಮುಂದಾಗಿ, ನಿಮ್ಮಿಂದ ನಮ್ಮನ್ನು ಏನು ಮಾಡಲು ಸಾಧ್ಯ ಇಲ್ಲ. ಈ ವಿಚಾರವನ್ನು ನೀವು ಯಾರಿಗಾದರೂ ಹೇಳಿದರೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆ ಕುರಿತಂತೆ ಸಿಸ್ಟರ್ ಪರಿಮಳ ಅವರು ನೀಡಿರುವ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಕಲಂ: 447, 504, 506 ಹಾಗೂ 34 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..