1. Home
  2. Kadaba
  3. ಕಡಬ : SSLC ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ನೂಜಿಬಾಳ್ತಿಲದಲ್ಲಿ ಇಬ್ಬರು ಪೋಲಿಸರ‌ ವಶಕ್ಕೆ..!!

ಕಡಬ : SSLC ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ನೂಜಿಬಾಳ್ತಿಲದಲ್ಲಿ ಇಬ್ಬರು ಪೋಲಿಸರ‌ ವಶಕ್ಕೆ..!!

ಕಡಬ : SSLC ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ನೂಜಿಬಾಳ್ತಿಲದಲ್ಲಿ ಇಬ್ಬರು ಪೋಲಿಸರ‌ ವಶಕ್ಕೆ..!!
0

ನ್ಯೂಸ್ ಆ್ಯರೋ‌ : ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಇಬ್ಬರು ವ್ಯಕ್ತಿಗಳನ್ನು ಕಡಬ ಠಾಣಾ ಪೋಲಿಸರು ವಶಕ್ಕೆ ಪಡೆದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದೆ.

ನೂಜಿಬಾಳ್ತಿಲದ ಖಾಸಗಿ ಶಾಲೆಯೊಂದರಲ್ಲಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಪುಸಲಾಯಿಸಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಈ ಮೊದಲೇ ಆರೋಪಿ ಯುವಕನಿಗೆ ಬಾಲಕಿಯ ಮನೆಯವರು ಎಚ್ಚರಿಕೆ ನೀಡಿದ್ದರೂ ಯುವಕ ಕ್ಯಾರೇ ಅಂದಿರಲಿಲ್ಲ‌‌ ಎನ್ನಲಾಗಿದೆ. ಅಲ್ಲದೆ ಆರೋಪಿ ಯುವಕ ಹೊರಗಿನವನಾಗಿದ್ದು, ಆತನಿಗೆ ಸ್ಥಳೀಯ ಯುವಕನೊಬ್ಬ ಆಶ್ರಯ ನೀಡಿದ್ದ ಎನ್ನಲಾಗಿದೆ.

ಸದ್ಯ ಆಶ್ರಯ ನೀಡಿದ ಸ್ಥಳೀಯ ವ್ಯಕ್ತಿಯನ್ನು ಪೋಲಿಸರು ತನಿಖೆಗಾಗಿ ವಶಕ್ಕೆ ಪಡೆದಿದ್ದು ಹಾಗೂ ಅತ್ಯಾಚಾರ ಎಸಗಿದ ಆರೋಪಿಯ‌ನ್ನು ಬಂಧಿಸಿದ್ದಾರೆ. ಸದ್ಯ ಸಂತ್ರಸ್ತ ಬಾಲಕಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಪೋಲಿಸರು ಪೊಕ್ಸೊ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..