1. Home
  2. Karnataka
  3. ಮಠದ ನೌಕರರ ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡ್ತಿದ್ರಂತೆ ಮುರುಘಾಶ್ರೀ – ಸ್ವಾಮೀಜಿ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಮಠದ ನೌಕರರ ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡ್ತಿದ್ರಂತೆ ಮುರುಘಾಶ್ರೀ – ಸ್ವಾಮೀಜಿ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಮಠದ ನೌಕರರ ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡ್ತಿದ್ರಂತೆ ಮುರುಘಾಶ್ರೀ – ಸ್ವಾಮೀಜಿ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು
0

ನ್ಯೂಸ್ ಆ್ಯರೋ : ಮಠದ ಹಾಸ್ಟೆಲ್ ನಲ್ಲಿದ್ದ ಅಪ್ರಾಪ್ತ ಬಾಲಕಿಯರಿಬ್ಬರನ್ನು ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಜೈಲಿನಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇದೀಗ ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಅಂತಹದ್ದೇ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ಮುರುಘಾ ಮಠದಲ್ಲಿ‌ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡಿದ ಶ್ರೀಗಳ ವಿರುದ್ಧ ನಿನ್ನೆ ತಡ ರಾತ್ರಿ ಮೈಸೂರಿನ ನಜರಬಾದ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅದರಂತೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದು, ಬಳಿಕ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ (POCSO case) ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು.

ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರುಗಳು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಶ್ರೀಗಳನ್ನು ಬಂಧಿಸಿದ ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದಿದ್ದರು. ಇದೀಗ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದ್ದು, ಸದ್ಯ ಜೈಲಿನಲ್ಲಿರುವ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..