1. Home
  2. Karnataka
  3. SC, ST ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್ – ಸರ್ವಪಕ್ಷ ಸಭೆ ತೀರ್ಮಾನ, ಸಿಎಂ ಹೇಳಿಕೆ

SC, ST ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್ – ಸರ್ವಪಕ್ಷ ಸಭೆ ತೀರ್ಮಾನ, ಸಿಎಂ ಹೇಳಿಕೆ

SC, ST ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್ – ಸರ್ವಪಕ್ಷ ಸಭೆ ತೀರ್ಮಾನ, ಸಿಎಂ ಹೇಳಿಕೆ
0

ನ್ಯೂಸ್ ಆ್ಯರೋ‌ : ಈಗಾಗಲೇ ಎಸ್ಸಿ, ಎಸ್ಟಿ ಮೀಸಲಾತಿಯನ್ನು ಕೈ ಬಿಡಬೇಕು, ಏಕ ರೀತಿ ನಾಗರಿಕ ಸಂಹಿತೆ ಬರಬೇಕು ಎಂಬ ಕೂಗು ಜೋರಾಗಿದ್ದು ಇದರ ನಡುವೆ ಬೊಮ್ಮಾಯಿ ಸರ್ಕಾರ ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಶುಕ್ರವಾರ ನಡೆದ ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಮೂಲಕ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಭರ್ಜರಿ ಗಿಫ್ಟ್ ನೀಡಿದಂತಾಗಿದೆ.

ನಿನ್ನೆ ನಡೆದ ಸರ್ವಪಕ್ಷ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಸ್ಸಿ, ಎಸ್ಟಿಗೆ ಸೇರಿದವರಿಗೆ ಹೆಚ್ಚಿನ ಅವಕಾಶ ನೀಡಲು ಅನುಕೂಲವಾಗುವಂತೆ ಮೀಸಲಾತಿ ಪ್ರಮಾಣವನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ. 15ರಿಂದ ಶೇ. 17ಕ್ಕೆ ಹಾಗೂ ಎಸ್ಟಿ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ. 3ರಿಂದ 7ಕ್ಕೆ ಹೆಚ್ಚಳ ಮಾಡಲಾಗುವುದು ಎಂದರು.

ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಸಮಿತಿ ಇದರ ಬಗ್ಗೆ ಅಧ್ಯಯನ ಮಾಡಿ, ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈ ವರದಿಯ ಬಗ್ಗೆ ಸರ್ವ ಪಕ್ಷ ಸಭೆಯಲ್ಲಿ ಚರ್ಚೆ ನಡೆದು ಎಲ್ಲರ ಒಮ್ಮತದ ಬಳಿಕ ಸರ್ವಪಕ್ಷ ಸಭೆಯ ನಿರ್ಣಯವನ್ನು ಸಚಿವ ಸಂಪುಟದಲ್ಲಿ ಇರಿಸಿ ಅಂಗೀಕಾರ ಪಡೆದುಕೊಂಡ ನಂತರ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದರು.

ಈ ಸಭೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಸಚಿವರಾದ ಗೋವಿಂದ ಕಾರಜೋಳ ಸಹಿತ ಹಲವು ಮಂದಿ ಉಪಸ್ಥಿತರಿದ್ದರು.

ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಗಳು ಬಾಕಿ ಇರುವ ಈ ಸಂದರ್ಭ ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿರುವುದು ಚುನಾವಣಾ ತಂತ್ರಗಾರಿಕೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..