ರಾಜ್ಯದ ಹಲವು ಜಿಲ್ಲೆಗಳ RTO ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ – ದಾಖಲೆಗಳ ಪರಿಶೀಲನೆ, ಬೆಳ್ಳಂಬೆಳಗ್ಗೆ RTO ಅಧಿಕಾರಿಗಳ ಚಳಿಬಿಡಿಸಿದ ಲೋಕಾಯುಕ್ತ ದಾಳಿ

ನ್ಯೂಸ್ ಆ್ಯರೋ : ಹಣ ವಸೂಲಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯದ ಕಲ್ಬುರ್ಗಿ, ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಆರ್ಟಿಒ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಬೀದರ್ ಜಿಲ್ಲೆಯ ಹುಮ್ನಾಬಾದ್ ಚೆಕ್ ಪೋಸ್ಟ್ ಸೇರಿ ರಾಜ್ಯದ ಹಲವು ಲೋಕಾಯುಕ್ತ ತಂಡ ಧಿಡೀರ್ ದಾಳಿ ನಡೆಸಿದೆ. ಕಲಬುರಗಿ, ಬೀದರ್, ಲೋಕಾಯುಕ್ತ ತಂಡ ಈ ಕಾರ್ಯಾಚರಣೆ ನಡೆಸಿ ಪರಿಶೀಲನೆ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರು ಕೇಳಿಬಂದ ಹಿನ್ನೆಲೆ ಲೋಕಾಯುಕ್ತಅಧಿಕಾರಿಗಳು ಹುಮ್ನಾಬಾದ್, ಅತ್ತಿಬೆಲೆ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನೊಂದೆಡೆ ಗುಂಡ್ಲುಪೇಟೆ ಪ್ರವಾಸಿ ಮಂದಿರ ವೃತ್ತದಲ್ಲಿರುವ ಆರ್ ಟಿ ಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆದಿದೆ. ಆರ್ ಟಿ ಒ ಅಧಿಕಾರಿ ಮಹೇಶ್ ಕರ್ತವ್ಯದಲ್ಲಿದ್ದ ವೇಳೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹಣ ವಸೂಲಿ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಬೀದರ್ ನ ಹುಮನಾಬಾದ್ ನಲ್ಲಿರುವ ಆರ್ ಟಿ ಒ ಚೆಕ್ ಪೋಸ್ಟ್ ಮೇಲೂ ದಾಳಿ ನಡೆಸಿದೆ. ಬೆಳಗ್ಗೆ ನಾಲ್ಕು ಗಂಟೆಯಿಂದ ರಾಜ್ಯದಾದ್ಯಂತ ಆರ್ ಟಿ ಓ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಸುಮೋಟೋ ಕೇಸ್ ಆಧಾರದಲ್ಲಿ ಅತ್ತಿಬೆಲೆ, ವಿಜಯಪುರದ ಜಳಲಿ ಪೋಸ್ಟ್, ಬೆಳಗಾವಿಯ ನಿಪ್ಪಾಣಿ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ, ಕೋಲಾರದ ನಂಗ್ಲಿ, ಬಳ್ಳಾರಿಯಲ್ಲಿ ದಾಳಿ ನಡೆದಿದೆ. ಕೊಪ್ಪಳ, ಹೊಸಪೇಟೆ, ಗುಂಡ್ಲುಪೇಟೆ, ಬೀದರ್ ನ ಹುಮ್ನಾಬಾದ್ ಭಾಗದ ಆರ್ ಟಿ ಓ ಚೆಕ್ ಪೋಸ್ಟ್ ಮೇಲೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.