ನ್ಯೂಸ್ ಆ್ಯರೋ : ಬೆಂಗಳೂರು ಮೂಲದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದ್ದು, ಗೋವಾದಲ್ಲಿ ಪತ್ತೆಯಾಗಿದ್ದಾಳೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನ ಭಾರ್ಗವಿ (14) ಎಂಬ ಬಾಲಕಿ ನಾಪತ್ತೆಯಾಗಿದ್ದು, ಬಳಿಕ ಆಕೆಯ ಚಲನವಲನ ಮಂಗಳೂರಿನ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಪತ್ತೆಯಾಗಿತ್ತು.
ಕಳೆದ ಸೋಮವಾರ ಈಕೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದು ಬಸ್ ಮೂಲಕ ಮುಂಜಾನೆ 3 ಗಂಟೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಳು.
ಸದ್ಯ ಬಾಲಕಿ ಗೋವಾ ಪೋಲಿಸರ ವಶದಲ್ಲಿದ್ದು, ಆಕೆಯ ಪೋಷಕರು ಆಕೆಯನ್ನು ಕರೆತರಲು ಗೋವಾಕ್ಕೆ ತೆರಳುತ್ತಿರುವುದಾಗಿ ಆಪ್ತ ಮೂಲಗಳಿಂದ ತಿಳಿದುಬಂದಿದೆ.
ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದ ಕಾರಣ ಮನನೊಂದ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಳು ಎನ್ನಲಾಗಿದ್ದು, ಕೇವಲ ಮೂರು ಸಾವಿರ ರೂಪಾಯಿ ನಗದಿನ ಜೊತೆ ಮನೆಯಿಂದ ತೆರಳಿದ್ದಳು ಎನ್ನಲಾಗಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..