1. Home
  2. Karnataka
  3. ಬ್ರಹ್ಮಶ್ರೀ ನಾರಾಯಣ ಕೋಶ ಸ್ಥಾಪನೆಗೆ ಪ್ರಣವಾನಂದ ಸ್ವಾಮೀಜಿ ಆಕ್ಷೇಪ – ಆದೇಶ ಪ್ರತಿ ಹರಿದು ಸರ್ಕಾರದ ವಿರುದ್ಧ ಆಕ್ರೋಶ

ಬ್ರಹ್ಮಶ್ರೀ ನಾರಾಯಣ ಕೋಶ ಸ್ಥಾಪನೆಗೆ ಪ್ರಣವಾನಂದ ಸ್ವಾಮೀಜಿ ಆಕ್ಷೇಪ – ಆದೇಶ ಪ್ರತಿ ಹರಿದು ಸರ್ಕಾರದ ವಿರುದ್ಧ ಆಕ್ರೋಶ

ಬ್ರಹ್ಮಶ್ರೀ ನಾರಾಯಣ ಕೋಶ ಸ್ಥಾಪನೆಗೆ ಪ್ರಣವಾನಂದ ಸ್ವಾಮೀಜಿ ಆಕ್ಷೇಪ – ಆದೇಶ ಪ್ರತಿ ಹರಿದು ಸರ್ಕಾರದ ವಿರುದ್ಧ ಆಕ್ರೋಶ
0

ನ್ಯೂಸ್ ‌ಆ್ಯರೋ : ಬ್ರಹ್ಮಶ್ರೀ ನಾರಾಯಣ ಕೋಶ ಸ್ಥಾಪಿಸುವ ರಾಜ್ಯ ಸರಕಾರದ ಆದೇಶ ಪ್ರತಿಯನ್ನು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿಯೇ ಹರಿದು ಹಾಕಿದ್ದಾರೆ.

ಮಂಗಳೂರಿನ ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಮಾತನಾಡಿದ ಅವರು, ಬಿಲ್ಲವ, ಈಡಿಗ, ನಾಮಧಾರಿ ಸೇರಿದಂತೆ 26 ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸೇರಿದಂತೆ ನಮ್ಮ ಹಲವಾರು ಬೇಡಿಕೆಗಳನ್ನು ಈಡೇರಿಸದೆ ರಾಜ್ಯ ಸರಕಾರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡುತ್ತಿದ್ದು, ಇದೀಗ ಸರ್ಕಾರ ಬ್ರಹ್ಮಶ್ರೀ ನಾರಾಯಣ ಕೋಶ ಸ್ಥಾಪಿಸಲು ಹೊರಟಿದೆ. ಈ ಕೋಶಕ್ಕೆ ತಂದೆ – ತಾಯಿಯಿಲ್ಲ ಮೇಲ್ವರ್ಗದವರಿಗೆ ನಿಗಮ ಕೊಡುವ ರಾಜ್ಯ ಸರಕಾರ. ನಮ್ಮ ಸಮುದಾಯಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಕೋಶ ನೀಡಿ ಸರಕಾರ ನಾಟಕವಾಡುತ್ತಿದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ಕೋಶವನ್ನು ಯಾವಾಗ ಬೇಕಾದರೂ ತೆಗೆಯ ಬಹುದಾಗಿದ್ದು, ಇದಕ್ಕೆ ಅಧ್ಯಕ್ಷರಾಗಲಿ, ನಿರ್ದೇಶಕರಾಗಲಿ ಇರುವುದಿಲ್ಲ. ಕೇವಲ ನಿವೃತ್ತ ಸರಕಾರಿ ಅಧಿಕಾರಿ ಅಥವಾ ನಿವೃತ್ತ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಿ ಕಾಟಚಾರಕ್ಕೆ ಇದನ್ನು ಸ್ಥಾಪಿಸಲಾಗಿದೆ ಎಂದರು.

ಸರ್ಕಾರದ ಈ ನಡೆಯಿಂದ ನಮ್ಮ ಸಮುದಾಯಕ್ಕೆ ದ್ರೋಹವಾಗಿದ್ದು, ಇದನ್ನು ನಾವು ಖಂಡಿಸುತ್ತೇವೆ. ಕಾಟಚಾರಕ್ಕೆ ಮಾಡಿದ ಕೋಶ ನಮಗೆ ಅವಶ್ಯಕತೆಯಿಲ್ಲ. ಸಾಧ್ಯವಾದರೆ ನಾರಾಯಣ ಗುರು ನಿಗಮ ನಿರ್ಮಿಸಿ 500 ಕೋಟಿ ರೂ. ಮೀಸಲಿಡಬೇಕು. ಆದ್ದರಿಂದ ಸರ್ಕಾರದ ಬೋಗಸ್ ಕೋಶದ ಆದೇಶ ಪ್ರತಿಯನ್ನು ಹರಿದು ಹಾಕಿದ್ದೇನೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..