1. Home
  2. Karnataka
  3. ರಾಜ್ಯದ SC/ST ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ದೀಪಾವಳಿ ಹಬ್ಬದ ಗಿಫ್ಟ್ – ಮೀಸಲಾತಿ ಹೆಚ್ಚಿಸುವ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ : ಹೆಚ್ಚಾಗಿದ್ದೆಷ್ಟು ಗೊತ್ತಾ..!?

ರಾಜ್ಯದ SC/ST ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ದೀಪಾವಳಿ ಹಬ್ಬದ ಗಿಫ್ಟ್ – ಮೀಸಲಾತಿ ಹೆಚ್ಚಿಸುವ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ : ಹೆಚ್ಚಾಗಿದ್ದೆಷ್ಟು ಗೊತ್ತಾ..!?

ರಾಜ್ಯದ SC/ST ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ದೀಪಾವಳಿ ಹಬ್ಬದ ಗಿಫ್ಟ್ – ಮೀಸಲಾತಿ ಹೆಚ್ಚಿಸುವ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ : ಹೆಚ್ಚಾಗಿದ್ದೆಷ್ಟು ಗೊತ್ತಾ..!?
0

ನ್ಯೂಸ್ ಆ್ಯರೋ : ರಾಜ್ಯ ಸರ್ಕಾರ SC/ST ಸಮುದಾಯಕ್ಕೆ ದೀಪಾವಳಿ ಹಬ್ಬದ ಗಿಫ್ಟ್ ನೀಡಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಸಂಬಂಧದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ.

ಇಂದಿನಿಂದಲೇ(ಅಕ್ಟೋಬರ್ 24) ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳವಾಗಲಿದೆ. ಮೀಸಲಾತಿ ಹೆಚ್ಚಳ ಸಂಬಂಧ ಗೆಜೆಟ್ ನೋಟಿಫಿಕೇಶನ್ ಪ್ರಕಟವಾಗಿದೆ. ಇದರೊಂದಿಗೆ ಎಸ್ಸಿ ಸಮುದಾಯದ ಮೀಸಲಾತಿ ಶೇ.15ರಿಂದ ಶೇ.17ಕ್ಕೆ ಹೆಚ್ಚಳವಾಗಲಿದ್ದು, ಎಸ್ಟಿ ಸಮುದಾಯದ ಮೀಸಲಾತಿ ಶೇ.3ರಿಂದ ಶೇ.7ಕ್ಕೆ ಹೆಚ್ಚಳವಾಗಲಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಎಸ್ಸಿ, ಎಸ್ಟಿಗೆ ಹೆಚ್ಚುವರಿ ಮೀಸಲಾತಿ ದೊರೆಯಲಿದೆ.

ಪರಿಶಿಷ್ಟ ಜಾತಿ (ಎಸ್ಸಿ) ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ ‘ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಸುಗ್ರೀವಾಜ್ಞೆ- 2022’ಗೆ ಕೇವಲ ಸರ್ಕಾರಿ ಆದೇಶದ ಮೂಲಕ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಿಸಿದರೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಹುದು ಎಂಬ ಕಾರಣಕ್ಕೆ ಸುಗ್ರೀವಾಜ್ಞೆ ಮೂಲಕ ಸರ್ಕಾರ ಅದನ್ನು ಜಾರಿಗೊಳಿಸಿದೆ.

ಕಳೆದ ರಾತ್ರಿ ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ಇದರಿಂದ ಇನ್ನು ಮುಂದೆ ಅನುಸೂಚಿತ ಜಾತಿಯ ಮೀಸಲಾತಿ ಪ್ರಮಾಣ ಶೇ. 15 ರಿಂದ 17ಕ್ಕೆ ಏರಲಿದ್ದು, ಅನುಸೂಚಿತ ಪಂಗಡಗಳ ಮೀಸಲಾತಿ ಪ್ರಮಾಣ ಶೇ. 3ರಿಂದ 7 ಕ್ಕೆ ಏರಿಸಲಾಗಿದೆ.

ರಾಜ್ಯಪಾಲರ ಅಂಕಿತ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸುಗ್ರಾವಾಜ್ಞೆಗೆ ಅಂಕಿತ ಹಾಕಿರುವ ರಾಜ್ಯಪಾಲರಿಗೆ ನನ್ನ ಕೃತಜ್ಞತೆಗಳು ಎಂದಿದ್ದಾರೆ. ವಿಧಾನಮಂಡಲದ ಎರಡೂ ಸದನಗಳಲ್ಲೂ ವಿಧೇಯಕ ಮಂಡನೆ ಮಾಡಿ ಮೀಸಲಾತಿ ವಿಧೇಯಕಕ್ಕೆ ಸದನಗಳ ಒಪ್ಪಿಗೆ ಪಡೆಯಲಾಗುವುದು. ನಮ್ಮ ಸರ್ಕಾರ ಮೀಸಲಾತಿ ಪ್ರಮಾಣ ಹೆಚ್ಚಿಸಿ ಬದ್ಧತೆಯಿಂದ ನಡೆದಿದೆ. ಇನ್ನು ಮುಂದೆ SCಗೆ ಶೇ.17 ಹಾಗೂ STಗೆ ಶೇ.7ರಷ್ಟು ಮೀಸಲಾತಿ ಜಾರಿಯಾಗಲಿದ್ದು,- ಮೀಸಲಾತಿ ಸುಗ್ರೀವಾಜ್ಞೆಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದು ಸಂತಸದ ಸಂಗತಿಯಾಗಿದೆ ಎಂದು ಸಿಎಂ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..