1. Home
  2. Kadaba
  3. ಕಡಬ : ಅಟೋ ರಿಕ್ಷಾ ಮತ್ತು ಪಿಕಪ್ ನಡುವೆ ಢಿಕ್ಕಿ – ನಾಲ್ಕು ವರ್ಷದ ಬಾಲಕನ ದುರ್ಮರಣ

ಕಡಬ : ಅಟೋ ರಿಕ್ಷಾ ಮತ್ತು ಪಿಕಪ್ ನಡುವೆ ಢಿಕ್ಕಿ – ನಾಲ್ಕು ವರ್ಷದ ಬಾಲಕನ ದುರ್ಮರಣ

ಕಡಬ : ಅಟೋ ರಿಕ್ಷಾ ಮತ್ತು ಪಿಕಪ್ ನಡುವೆ ಢಿಕ್ಕಿ – ನಾಲ್ಕು ವರ್ಷದ ಬಾಲಕನ ದುರ್ಮರಣ
0

ನ್ಯೂಸ್ ಆ್ಯರೋ‌ : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೊಬ್ಬ ಮೃತಪಟ್ಟ ಘಟನೆ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಇಂದು ಸಂಜೆ ನಡೆದಿದೆ.

ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಢಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನೆಟ್ಟಣದ ಮೆಡಿಕಲ್ ಶಾಪ್ ಮಾಲಕ ಪಂಜ ನಿವಾಸಿ ನವೀನ್ ಎಂಬವರ ಪುತ್ರ, ಕಡಬದ ವಿದ್ಯಾನಗರ ಸರಸ್ವತೀ ವಿದ್ಯಾಲಯದ ಶಿಶು ಮಂದಿರದ ವಿದ್ಯಾರ್ಥಿ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದ.

ಕೂಡಲೇ ಆತನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..