1. Home
  2. Bantwal
  3. ಬಂಟ್ವಾಳ : ಹಾಡುಹಗಲೇ ಮನೆಗೆ ನುಗ್ಗಿ ಕಳ್ಳರ ಕರಾಮತ್ತು – ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ

ಬಂಟ್ವಾಳ : ಹಾಡುಹಗಲೇ ಮನೆಗೆ ನುಗ್ಗಿ ಕಳ್ಳರ ಕರಾಮತ್ತು – ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ

ಬಂಟ್ವಾಳ : ಹಾಡುಹಗಲೇ ಮನೆಗೆ ನುಗ್ಗಿ ಕಳ್ಳರ ಕರಾಮತ್ತು – ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ
0

ನ್ಯೂಸ್ ಆ್ಯರೋ : ಹಾಡುಹಗಲೇ ಮನೆಗೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿರೋಡ್ ನ ಚಿಕ್ಕಯ್ಯಮಠ ಎಂಬಲ್ಲಿ ನಡೆದಿದೆ.

ಇಲ್ಲಿನ ಚಿಕ್ಕಯ್ಯಮಠ ನಿವಾಸಿ ಸತೀಶ್ ಎಂಬವರ ಮನೆಯಿಂದ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ನಡೆದಿದೆ.

ಮನೆಯ ಮುಂಬಾಗಿಲ ಚಿಲಕ ಮುರಿದು ಒಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಸುಮಾರು 4.60 ಮೌಲ್ಯದ 11.5 ಪವನ್ ಚಿನ್ನವನ್ನು ಕಳವು ಮಾಡಲಾಗಿದೆ ಎಂದು ಮನೆಯ ಮಾಲಕ ಸತೀಶ್ ಅವರ ಪತ್ನಿ ಸಂಧ್ಯಾ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸತೀಶ್ ಹಾಗೂ ಅವರ ಪತ್ನಿ ಸಂಧ್ಯಾ ಬೆಳಗ್ಗೆ ಮನೆಯಿಂದ ಕೆಲಸಕ್ಕೆ ತೆರಳಿದ್ದು ಕೆಲಸ ಮುಗಿಸಿ ಸಂಜೆ 6 ಗಂಟೆ ವೇಳೆಗೆ ಮನೆಗೆ ಬಂದು ನೋಡಿದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..