1. Home
  2. Local
  3. News
  4. ಉಡುಪಿ‌ : ಪೂಜೆ ಮುಗಿಸಿ ಹಿಂತಿರುಗಿ ಬರುತ್ತಿದ್ದಾಗ ಕುಸಿದು ಬಿದ್ದು ಮಹಿಳೆ ಕೊನೆಯುಸಿರು – ಅನಾರೋಗ್ಯದಿಂದ ಸಾವು ಶಂಕೆ

ಉಡುಪಿ‌ : ಪೂಜೆ ಮುಗಿಸಿ ಹಿಂತಿರುಗಿ ಬರುತ್ತಿದ್ದಾಗ ಕುಸಿದು ಬಿದ್ದು ಮಹಿಳೆ ಕೊನೆಯುಸಿರು – ಅನಾರೋಗ್ಯದಿಂದ ಸಾವು ಶಂಕೆ

ಉಡುಪಿ‌ : ಪೂಜೆ ಮುಗಿಸಿ ಹಿಂತಿರುಗಿ ಬರುತ್ತಿದ್ದಾಗ ಕುಸಿದು ಬಿದ್ದು ಮಹಿಳೆ ಕೊನೆಯುಸಿರು – ಅನಾರೋಗ್ಯದಿಂದ ಸಾವು ಶಂಕೆ
0

ನ್ಯೂಸ್ ಆ್ಯರೋ‌ : ಪೂಜೆಗೆ ಹೋಗಿ ಹಿಂತಿರುಗುವ ವೇಳೆ ದಿಢೀರನೆ ಕುಸಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಸಮೀಪದ ಮಣಿಪುರ ದೆಂದೂರುಕಟ್ಟೆಯಲ್ಲಿ ನಡೆದಿದೆ.

ಮಣಿಪುರ ದೆಂದೂರುಕಟ್ಟೆ, ಇಂದ್ರಾಳಿ ತೋಟದ ಗೌರಿ ಪೂಜಾರ್ತಿ (54) ಮೃತ ದುರ್ದೈವಿ.

ಮಣಿಪಾಲದ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಇವರು ಅನೇಕ ಸಮಯದಿಂದ ಉಬ್ಬಸ ಖಾಯಿಲೆಯಿಂದ ಬಳಲುತ್ತಿದ್ದರು. ನಿನ್ನೆ ಸಂಜೆ ಸಂಬಂಧಿಕರ ಮನೆಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಾಸಾಗುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ.

ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗದೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..