ನ್ಯೂಸ್ ಆ್ಯರೋ : ತನಗೆ ಉದ್ಯೋಗಕ್ಕೆ ಸೇರ್ಪಡೆಯಾಗಲು ಇರುವ ಬಗ್ಗೆ ಇಂಟರ್‌ವ್ಯೂಗೆ ಲೆಟರ್ ಬಂದಿದ್ದು, ತಾನು ಇಂಟರ್‌ವ್ಯೂಗೆ ಹೋಗಿ ಬರುತ್ತೇನೆ ಎಂದು ಮನೆಮಂದಿಯಲ್ಲಿ ಹೇಳಿ ಹೋಗಿದ್ದ ಯುವತಿ ಮರಳಿ ಬಾರದೇ ನಾಪತ್ತೆಯಾಗಿದ್ದಾಳೆ.
ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಕಂಬಳಬೆಟ್ಟು ನಿವಾಸಿ ದಿವಂಗತ ಆನಂದ ಅವರ ಪುತ್ರಿ ಸುಶ್ಮಿತ (21) ನಾಪತ್ತೆಯಾದ ಯುವತಿ.
ನವೆಂಬರ್ 8 ರಂದು ಮಂಗಳವಾರ ಬೆಳಿಗ್ಗೆ ಮನೆಯಿಂದ ಮಂಗಳೂರಿನಲ್ಲಿ ಕೆಲಸವೊಂದರ ಇಂಟರ್‌ವ್ಯೂ ಇದೆ ಎಂದು ಹೇಳಿ ಮನೆಯಿಂದ ಹೋದವಳು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ.
ವಿಟ್ಲ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಈಕೆಯ ಹುಡುಕಾಟ ನಡೆಸುತ್ತಿದ್ದು, ಪತ್ತೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..