1. Home
  2. Mangaluru
  3. ಬೆಳ್ತಂಗಡಿ : ವಕೀಲರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಆರೋಪ – ಪೂಂಜಾಲಕಟ್ಟೆ ಸಬ್ ಇನ್ಸ್‌ಪೆಕ್ಟರ್ ಸುತೇಶ್ ಸಸ್ಪೆಂಡ್

ಬೆಳ್ತಂಗಡಿ : ವಕೀಲರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಆರೋಪ – ಪೂಂಜಾಲಕಟ್ಟೆ ಸಬ್ ಇನ್ಸ್‌ಪೆಕ್ಟರ್ ಸುತೇಶ್ ಸಸ್ಪೆಂಡ್

ಬೆಳ್ತಂಗಡಿ : ವಕೀಲರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಆರೋಪ – ಪೂಂಜಾಲಕಟ್ಟೆ ಸಬ್ ಇನ್ಸ್‌ಪೆಕ್ಟರ್ ಸುತೇಶ್ ಸಸ್ಪೆಂಡ್
0

ನ್ಯೂಸ್ ಆ್ಯರೋ‌ : ನ್ಯಾಯವಾದಿ ಮೇಲೆ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್ ಐ ಸುತೇಶ್ ಅಮಾನತುಗೊಂಡಿದ್ದಾರೆ.

ನ್ಯಾಯವಾದಿ ಕುಲದೀಪ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಎಸ್ ಐ ಸುತೇಶ್ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯದ ಡಿಐಜಿ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಲದೀಪ್ ಶೆಟ್ಟಿ ಅವರ ಮನೆಗೆ ನುಗ್ಗಿದ ಪೂಂಜಾಲಕಟ್ಟೆ ಪೊಲೀಸರು ಅವರ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ವಕೀಲರು ಪ್ರತಿಭಟನೆ ನಡೆಸಿದ್ದರು.

ಹಲ್ಲೆ ನಡೆಸಿದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಎಸ್ ಐ ಸುತೇಶ್ ಅವರನ್ನು ದ.ಕ. ಜಿಲ್ಲಾ ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಕಠಿಣ ಕ್ರಮಕ್ಕೆ ಆಗ್ರಹಿಸಿ ವಕೀಲರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು. ಇದೀಗ ಪಶ್ಚಿಮ ವಲಯ ಡಿಐಜಿ ಡಾ. ಚಂದ್ರಗುಪ್ತ ಅವರು ಅಮಾನತು ಆದೇಶ ಹೊರಡಿಸಿದ್ದು, ಪ್ರತಿಭಟನೆ ಕೊನೆಯಾಗುವ ಸಾಧ್ಯತೆ ಇದೆ.