ನ್ಯೂಸ್ ಆ್ಯರೋ : ಮಂಗಳೂರಿನ ಖಾಸಗಿ ಶಾಲೆಯೊಂದರ 8ನೇ ತರಗತಿಯ ಅಯ್ಯಪ್ಪ ಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಮಂಗಳವಾರ ಸಂಜೆ ನಡೆದಿದೆ.
8ನೇ ತರಗತಿಯ ವಿದ್ಯಾರ್ಥಿ ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಈ ಶಾಲೆಯಲ್ಲಿ ಪದೇ ಪದೇ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಶಿಕ್ಷಕರು ವಿದ್ಯಾರ್ಥಿಗಳಿಗೆ ಎಚ್ಚರಿಕೆಯನ್ನೂ ನೀಡಿದ್ದರು ಎಂದು ಹೇಳಲಾಗುತ್ತಿದೆ.
ಮಂಗಳವಾರವೂ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು 8ನೇ ತರಗತಿಯ ವಿದ್ಯಾರ್ಥಿಗೆ ನಿನ್ನನ್ನು ಹೊರಗೆ ನೋಡಿಕೊಳ್ಳುತ್ತೇವೆ’ ಎಂದು ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿಯು ಸಂಜೆ ಶಾಲೆ ಬಿಟ್ಟ ಬಳಿಕ ಬಸ್‌ಗಾಗಿ ಕಾಯುತ್ತಿದ್ದಾಗ 9ನೇ ತರಗತಿಯ 4 ಮಂದಿ ವಿದ್ಯಾರ್ಥಿಗಳು ಏಕಾಏಕಿ ಬಂದು ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೂಡಲೇ ಸ್ಥಳೀಯರು ತಡೆದಿದ್ದು, ಗಾಯಗೊಂಡ ವಿದ್ಯಾರ್ಥಿಯನ್ನು ನಗರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಕರಣ ದಾಖಲಿಸಿರುವ ಕಂಕನಾಡಿ ನಗರ ಠಾಣಾ ಪೊಲೀಸರು ಹಲ್ಲೆಗೈದ ಇಬ್ಬರು ಹಿರಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..