ನ್ಯೂಸ್ ಆ್ಯರೋ : ಆಟೋ ಚಾಲಕನೊಬ್ಬನ ಮೇಲೆ ನಾಲ್ವರಿದ್ದ ತಂಡವೊಂದು ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಘಟನೆ ಬೋಳಂತೂರು ಸಮೀಪದ ನಾಡಾಜೆ ಎಂಬಲ್ಲಿ ನಡೆದಿದೆ.
ಬೋಳಂತೂರು ಸಮೀಪದ ಗುಳಿ ನಿವಾಸಿ ಅಬೂಬಕ್ಕರ್ ಪುತ್ರ, ಆಟೋ ಚಾಲಕ ಶಾಕೀರ್(30 ವ.) ಗಾಯಗೊಂಡವರಾಗಿದ್ದು , ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಕಬಡ್ಡಿ ಮ್ಯಾಚ್ ಮುಗಿಸಿ ತಡರಾತ್ರಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಶಾಕೀರ್ ರನ್ನು ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ತಡೆದ ನಾಲ್ವರಿದ್ದ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ಗಾಯಾಳು ತಿಳಿಸಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..