ನ್ಯೂಸ್ ಆ್ಯರೋ : ಮಂಗಳೂರಿನಲ್ಲಿ ಮತ್ತೆ ಭಜರಂಗದಳದ ಕಾರ್ಯಕರ್ತರ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, ತಡರಾತ್ರಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ ಮೇಲೆ ಹಲ್ಲೆಗೆ ಯತ್ನ ನಡೆಸಿರುವ ಬಗ್ಗೆ ಆರೋಪ ಕೇಳಿಬಂದಿದೆ.
ಮಂಗಳೂರು ನಗರದ ಕೊಟ್ಟಾರ ಎಂಬಲ್ಲಿ ನಡೆದ ಘಟನೆ ನಡೆದಿದ್ದು, ರಾತ್ರಿ 12 ಗಂಟೆ ಸುಮಾರಿಗೆ ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯರು ಸುತ್ತಾಡುತ್ತಿದ್ದ ವೇಳೆ ಕೊಟ್ಟಾರ ಬಳಿ ತಡೆದ ಭಜರಂಗದಳದ ಕಾರ್ಯಕರ್ತರಿಂದ ಹಲ್ಲೆಗೆ ಯತ್ನ ನಡೆದಿದೆ ಎನ್ನಲಾಗಿದೆ.
ಹೊಟೇಲ್ ಗೆ ಊಟಕ್ಕೆ ಬಂದಿರೋದಾಗಿ ಜೋಡಿಗಳು ಹೇಳಿದ್ದು, ಮಧ್ಯರಾತ್ರಿ ಯಾವ ಹೊಟೇಲ್ ಇದೆ ಅಂತ ಹೇಳಿ ಹಲ್ಲೆಗೆ ಯತ್ನ ನಡೆಸಿದ್ದಾರೆ ಎನ್ನಲಾಗಿದೆ.
ಪೊಲೀಸರ ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ತಿಳಿಯಾಗಿದ್ದು, ಬಳಿಕ ಪೊಲೀಸ್ ಠಾಣೆಗೆ ತೆರಳಿ ಅಲ್ಲಿಂದ ಜೋಡಿ ತೆರಳಿದ್ದಾರೆ ಎನ್ನಲಾಗಿದೆ.
ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಪ್ರಕರಣ ದಾಖಲಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.