1. Home
  2. Mangaluru
  3. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರಿಗೆ ಮಾತೃವಿಯೋಗ – ಇಂದು‌ ಅಂತ್ಯಸಂಸ್ಕಾರ

ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರಿಗೆ ಮಾತೃವಿಯೋಗ – ಇಂದು‌ ಅಂತ್ಯಸಂಸ್ಕಾರ

ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರಿಗೆ ಮಾತೃವಿಯೋಗ – ಇಂದು‌ ಅಂತ್ಯಸಂಸ್ಕಾರ
0

ನ್ಯೂಸ್‌ ಆ್ಯರೋ : ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ತಾಯಿ, ಶ್ರೀ ಕ್ಷೇತ್ರ ಪೊಳಲಿಯ ಮಾಜಿ ಮೋಕ್ತೇಸರರಾಗಿದ್ದ ದಿ.ರಮೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ಧರ್ಮಪತ್ನಿ ಸರೋಜಿನಿ ಆರ್ ನಾಯ್ಕ್(90) ಸ್ವರ್ಗಸ್ಥರಾಗಿದ್ದಾರೆ.

ಶ್ರೀ ಕ್ಷೇತ್ರ ಪೊಳಲಿಯ ಮಾಜಿ ಮೊಕ್ತೆಸಾರರಾಗಿದ್ದ ದಿ. ರಮೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಧರ್ಮಪತ್ನಿಯಾಗಿರುವ ಸರೋಜಿನಿ ಅವರು ಬಡವರ ಬಗ್ಗೆ ಅಪಾರ ಕಾಳಅಜಿ ಹೊಂದಿದ್ದರು.

ದಾನಧರ್ಮದಲ್ಲಿ ಸದಾ ಮುಂಚೂಣಿಯಲ್ಲಿರುತ್ತಿದ್ದ ಅವರು ಮಗ ಶಾಸಕ ಮಗ ರಾಜೇಶ್ ನಾಯ್ಕ್ ಹಾಗೂ ಪುತ್ರಿ ರಜನಿ ಶೆಟ್ಟಿ ಅವರನ್ನು ಅಗಲಿದ್ದಾರೆ. ಇಂದು ಬೆಳಿಗ್ಗೆ 10.00 ಗಂಟೆಗೆ ಒಡ್ಡೂರು ಫಾರ್ಮ್ಸ್ ನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಸಚಿವರಾದ ಎಸ್ ಅಂಗಾರ, ಕೋಟಾ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್, ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..