ನ್ಯೂಸ್ ಆ್ಯರೋ : ಮಂಗಳೂರು ನಗರ ಹೊರವಲಯದ ಸುರತ್ಕಲ್‌ನಲ್ಲಿ ಭಾರ್ಗವಿ ಫೈನಾನ್ಸ್ ಮತ್ತು ಚಿಟ್ ಫಂಡ್ ನಡೆಸಿ ಅಮಾಯಕರಿಗೆ ವಂಚಿಸಿದ ಪ್ರಕರಕ್ಕೆ ಸಂಬಂಧಿಸಿ ಭಾರ್ಗವಿ ಫೈನಾನ್ಸ್ ಮಾಲಕ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ರನ್ನು ಸೆನ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಭಾರ್ಗವಿ ಫೈನಾನ್ಸ್ ಮತ್ತು ಚಿಟ್ ಫಂಡ್ ಮಾಡಿ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ಮತ್ತು ಪುತ್ರಿ ಪ್ರಿಯಾಂಕ ಭಟ್ ಎಂಬವರು ಕೋಟ್ಯಂತರ ರೂ. ವಂಚಿಸಿದ್ದಾರೆ ಎಂದು ಸುರತ್ಕಲ್ ಮೂಲದ ದೀಪಕ್ ಕುಮಾರ್ ಶೆಟ್ಟಿ ಎಂಬವರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಅಲ್ಲದೆ ಈತನಿಂದ ಮೋಸ ಹೋಗಿದ್ದ ಸಂತ್ರಸ್ತರು ಕೂಡಾ ತಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದರು.
ಈ ಸಂಬಂಧ ಸೆನ್ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಭಾರ್ಗವಿ ಫೈನಾನ್ಸ್ ಮಾಲಕ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 5 ದಿನಗಳ ಕಾಲ ಸೆನ್ ಪೊಲೀಸ್ ಅಧಿಕಾರಿಗಳ ಕಸ್ಟಡಿಗೆ ನೀಡಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..