ನ್ಯೂಸ್ ಆ್ಯರೋ : ಮಂಗಳೂರಿನ ಪ್ರತಿಷ್ಠಿತ ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಹಾಡಿಗೆ ನೃತ್ಯ ಮಾಡಿದ ಘಟನೆ ನಡೆದಿದೆ. ಈ ಆರೋಪದಲ್ಲಿ ಇಂದು ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.
ಬುಧವಾರ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಘಟಕ ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ಹಿಂದಿ ಐಟಂ ಸಾಂಗ್ ಗೆ ಮುಸ್ಲಿಂ ವಿದ್ಯಾರ್ಥಿನಿಯರ ನೃತ್ಯ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಡ್ಯಾನ್ಸ್ ಗೆ ಅವರದೇ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದರು.
ಅದನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಆಡಳಿತ ಮಂಡಳಿ ಆಂತರಿಕ ವಿಚಾರಣೆಯ ಬಳಿಕ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವುದಾಗಿ ತಿಳಿಸಿದೆ. ವಿದ್ಯಾರ್ಥಿಗಳನ್ನು ಸಸ್ಪೆಂಡ್ ಗೊಳಿಸಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ಸುಧೀರ್ ಆದೇಶ ಮಾಡಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿದ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ಸುಧೀರ್, ಕಾಲೇಜಿನ ಅಧಿಕೃತ ಕಾರ್ಯಕ್ರಮದ ಬಳಿಕ ನೃತ್ಯ ಮಾಡಿದ್ದಾರೆ. ಕಾಲೇಜು ಆವರಣದಲ್ಲಿ ಯಾವುದೇ ರೀತಿ ಆಕ್ಷೇಪಾರ್ಹ ಹಾಗೂ ಸಮುದಾಯಗಳ ನಡುವೆ ಸೌಹಾರ್ದತೆಗೆ ಧಕ್ಕೆ ತರುವ ಇಂತಹ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..