ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ದ.ಕ. ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ. ಅವರು ಮೈಸೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಪ್ರಭಾರ ಜಿಲ್ಲಾಧಿಕಾರಿಯಾಗಿ ದ.ಕ. ಜಿಪಂ ಸಿಇಒ ಡಾ.ಕುಮಾರ ಅವರಿಗೆ ಉಸ್ತುವಾರಿ ವಹಿಸಲಾಗಿತ್ತು. ಹಾಗಾಗಿ ನೂತನ ಜಿಲ್ಲಾಧಿಕಾರಿ ರವಿಕುಮಾರ್ ಅವರಿಗೆ ಕುಮಾರ್ ಅವರು ಅಧಿಕಾರ ಹಸ್ತಾಂತರ ಮಾಡಿದರು.
ಜಿಲ್ಲಾಧಿಕಾರಿ ರವಿಕುಮಾರ್ ಅವರು ಈ ಮೊದಲೇ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದರು.
ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಆಗಿದ್ದ ಎಂ.ಆರ್.ರವಿಕುಮಾರ್ ಅವರನ್ನು ರಾಜ್ಯ ಸರಕಾರ ಅ.31ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಆದೇಶ ಹೊರಡಿಸಿತ್ತು.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..