1. Home
  2. Mangaluru
  3. ನ. 19ರಿಂದ 24ರವರೆಗೆ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ – ರಸ್ತೆ ಅಭಿವೃದ್ಧಿಗೆ ರೂ 1 ಕೋಟಿ ಮಂಜೂರು

ನ. 19ರಿಂದ 24ರವರೆಗೆ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ – ರಸ್ತೆ ಅಭಿವೃದ್ಧಿಗೆ ರೂ 1 ಕೋಟಿ ಮಂಜೂರು

ನ. 19ರಿಂದ 24ರವರೆಗೆ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ – ರಸ್ತೆ ಅಭಿವೃದ್ಧಿಗೆ ರೂ 1 ಕೋಟಿ ಮಂಜೂರು
0


ನ್ಯೂಸ್ ಆ್ಯರೋ : ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವವು ನವೆಂಬರ್ 19ರಿಂದ 24ರ ವರೆಗೆ ನಡೆಯಲಿದೆ. ಭಕ್ತರ ಅನುಕೂಲಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳಕ್ಕೆ ಕಲ್ಪಿಸುವ ರಸ್ತೆಗಳನ್ನು ಸರಿಪಡಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಪತ್ರದ ಮುಖೇನ ಮನವಿಯನ್ನು ಮಾಡಿದ್ದರು. ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ರೂ 1 ಕೋಟಿಯನ್ನು ಮಂಜೂರು ಮಾಡಿದ್ದಾರೆ.


ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 73 ಗುರುವಾಯನಕೆರೆಯಿಂದ ಉಜಿರೆ ತನಕದ ರಸ್ತೆ ಹಾಗೂ ಕೇಂದ್ರ ಸರ್ಕಾರದಿಂದ ಸ್ಪರ್ ರಸ್ತೆಯಾಗಿ ಘೋಷಣೆಯಾಗಿರುವ ಪೆರಿಯಶಾಂತಿಯಿಂದ ಧರ್ಮಸ್ಥಳ ವರೆಗಿನ ರಸ್ತೆ ತೀರ ಹದಗೆಟ್ಟಿದ್ದು ಇದರಲ್ಲಿ ವಾಹನ ಸಂಚಾರ ಕಷ್ಟವಾಗಿದೆ.


ಧರ್ಮ, ಸಾಹಿತ್ಯ, ಕಲೆ, ಸಂಸ್ಕೃತಿಗೆ ಸಂಬಂಧಿಸಿದ ವೈವಿಧ್ಯಮಯ ಕಾರ್ಯಕ್ರಮಗಳು ಧರ್ಮಸ್ಥಳದ ದೀಪೋತ್ಸವ ಸಂದರ್ಭದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಲ್ಲಿದ್ದು, ಈ ಭಕ್ತಿಪೂರ್ವಕ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತಾಧಿಗಳು ಪಾಲ್ಗೊಳ್ಳಲಿದ್ದಾರೆ.


ಲಕ್ಷದೀಪೋತ್ಸವ ಕೇವಲ ಉತ್ಸವವಲ್ಲ. ಅಜ್ಞಾನದ ಅಂಧಕಾರವನ್ನು ತೊಲಗಿಸಿ, ಸುಜ್ಞಾನದ ಸುಗಂಧವನ್ನು ಪಸರಿಸುವ ಕಾಯಕ. ಇಲ್ಲಿ ಶಾಂತಿಯ ಸಂದೇಶವಿದೆ. ಸರಳತೆಯ ಮಾರ್ಗದರ್ಶನವಿದೆ. ಸಹ ಜೀವನದ ಬೋಧನೆ ಇದೆ. ಹಾಗಾಗಿ ಧರ್ಮಸ್ಥಳದ ಲಕ್ಷದ್ವೀಪಕ್ಕೆ ತನ್ನದೇ ಆದ ಹಿರಿಮೆಯಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..