1. Home
  2. Mangaluru
  3. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ ಮೈಸೂರಿಗೆ ವರ್ಗಾವಣೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ ಮೈಸೂರಿಗೆ ವರ್ಗಾವಣೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ ಮೈಸೂರಿಗೆ ವರ್ಗಾವಣೆ
0

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ದಕ್ಷ ಆಡಳಿತ ನೀಡಿದ್ದ ಡಾ. ಕೆ.ವಿ. ರಾಜೇಂದ್ರ (ಐಎಎಸ್) ಅವರನ್ನು ವರ್ಗಾವಣೆ ಮಾಡಲಾಗಿದ್ದು, ಮೈಸೂರು ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಳಿಸಲಾಗಿದೆ.

ರಾಜೇಂದ್ರ ಅವರು ಡಾ‌.ಬಗ್ದಾದಿ ಗೌತಮ್‌ ಅವರಿಂದ ತೆರವಾದ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಆದರೆ ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ಹೊಸ ಜಿಲ್ಲಾಧಿಕಾರಿಯ ನೇಮಕಾತಿ ಆಗದೇ ಇರುವುದರಿಂದ ಸದ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಡಾ. ಕುಮಾರ (ಐಎಎಸ್ 2015 ಬ್ಯಾಚ್) ಅವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹುದ್ದೆಯ ನಿರ್ವಹಣೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..