ನ್ಯೂಸ್ ಆ್ಯರೋ : ಕುಡಿದ ಮತ್ತಿನಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನೇ ಮರದ ರೀಪಿನಿಂದ ಹೊಡೆದು ಕೊಲೆಗೈದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಕಾರು ಪಲ್ಲದಕೋಡಿ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಸರಿತಾ (35) ಎಂದು ಗುರುತಿಸಲಾಗಿದೆ.
ಕೊಲೆ ಆರೋಪಿ ಈಕೆಯ ಪತಿ ದುರ್ಗೇಶ್ ಎಂಬಾತನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಈತ ನಿನ್ನೆ ರಾತ್ರಿ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಈತ ಪತ್ನಿ ಸರಿತಾಳಿಗೆ ರೀಪಿನಿಂದ ಹೊಡೆದಿದ್ದು, ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸರಿತಾಳಿಗೆ ರಾಹುಲ್ (11) ಓರ್ವ ಮಗ ಇದ್ದಾನೆ. ಘಟನಾ ಸ್ಥಳಕ್ಕೆ ಬಜಪೆ ಪೊಲೀಸರು ಹಾಗೂ ಎಸಿಪಿ ಮಹೇಶ್ ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..