1. Home
  2. Mangaluru
  3. ಸುರತ್ಕಲ್ : ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ವಶಕ್ಕೆ – ಮಹಿಳೆಯರ ಜೊತೆಗಿನ ದುರ್ವರ್ತನೆ ಕೊಲೆಗೆ ಕಾರಣ…!?

ಸುರತ್ಕಲ್ : ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ವಶಕ್ಕೆ – ಮಹಿಳೆಯರ ಜೊತೆಗಿನ ದುರ್ವರ್ತನೆ ಕೊಲೆಗೆ ಕಾರಣ…!?

ಸುರತ್ಕಲ್ : ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ವಶಕ್ಕೆ – ಮಹಿಳೆಯರ ಜೊತೆಗಿನ ದುರ್ವರ್ತನೆ ಕೊಲೆಗೆ ಕಾರಣ…!?
0

ನ್ಯೂಸ್ ಆ್ಯರೋ : ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ಶನಿವಾರ ರಾತ್ರಿ ನಡೆದ ಅಂಗಡಿ ಮಾಲಿಕ ಅಬ್ದುಲ್ ಜಲೀಲ್ (45) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ತೀವ್ರಗೊಳಿಸಿದ್ದಾರೆ.

ಹಲವು ಮಹಿಳೆಯರೊಂದಿಗೆ ಜಲೀಲ್ ದುರ್ವರ್ತನೆ ತೋರಿದ ಹಿನ್ನೆಲೆಯಲ್ಲಿ ಆತನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮಹಿಳೆ ವಿಚಾರವಾಗಿ ಇಬ್ಬರು ವ್ಯಕ್ತಿಗಳ ಜೊತೆಗೆ ಜಲೀಲ್ ಮತ್ತು ದುಷ್ಕರ್ಮಿಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರು ವ್ಯಕ್ತಿಗಳು ಜಲೀಲ್ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಜಲೀಲ್ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಕಾಲು ಜಾರಿ ಬಿದ್ದಿದ್ದಾನೆ. ಬಳಿಕ ಇಬ್ಬರು ಚಾಕುವಿನಿಂದ ಇರಿದು ಜಲೀಲ್ ನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು.

ಹತ್ಯೆ ಪ್ರಕರಣ ಸಂಬಂಧ ಹೇಳಿಕೆ ನೀಡಿದ ಸಿಎಂ ಬೊಮ್ಮಾಯಿಯವರು, ಪ್ರಕರಣ ಸಂಬಂಧ ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ದಕ್ಷಿಣ ಕನ್ನಡ ಮತ್ತು ಕಾಟಿಪಳ್ಳದ ಜನರ ಬಳಿ ಮನವಿ ಮಾಡಿಕೊಂಡರು. ಅಲ್ಲದೆ, ಪೊಲೀಸರು ನ್ಯಾಯಯುತ ತನಿಖೆ ನಡೆಸಲಿದ್ದಾರೆಂದು ಭರವಸೆ ನೀಡಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..