1. Home
  2. Mangaluru
  3. ಪುತ್ತೂರು : 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ – 1.36 ಲಕ್ಷ ದಂಡ ಪೀಕಿಸಿದ ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆ, ಏನಿದು ಪ್ರಕರಣ ?

ಪುತ್ತೂರು : 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ – 1.36 ಲಕ್ಷ ದಂಡ ಪೀಕಿಸಿದ ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆ, ಏನಿದು ಪ್ರಕರಣ ?

ಪುತ್ತೂರು : 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ – 1.36 ಲಕ್ಷ ದಂಡ ಪೀಕಿಸಿದ ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆ, ಏನಿದು ಪ್ರಕರಣ ?
0

ನ್ಯೂಸ್‌ ಆ್ಯರೋ‌ : ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆಗೆ ಬಸ್ಸಿನ ತೆರಿಗೆ ಪಾವತಿಸದೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ದಂಡ ಕಟ್ಟದೆ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನ್ಯಾಯಾಲಯದಲ್ಲಿ ದಂಡ ಪಾವತಿಸಿದ ಬಳಿಕ ಆತನ ಮೇಲಿರುವ ಪ್ರಕರಣ ರದ್ದುಪಡಿಸಲಾಗಿದೆ.

ನೆಕ್ಕಿಲಾಡಿಯ ಅರಫ್ ಕಾಟೇಜ್‌ನ ಪಿ.ಉಸ್ಮಾನ್ (42ವ) ಎಂಬಾತ ಬಂಧಿತ ಆರೋಪಿ.

ಈತ 2005ನೇ ಇಸವಿಯಲ್ಲಿ KA 21- C 5772 ಖಾಸಗಿ ಬಸ್‌ನ ಮಾಲಕನಾಗಿದ್ದು, ಆ ಬಸ್‌ ಗೆ ಸಂಬಂಧಿಸಿದ ತೆರಿಗೆಯನ್ನು ಪ್ರಾದೇಶಿಕಸಾರಿಗೆ ಇಲಾಖೆಗೆ ಪಾವತಿಸದೆ ಓಡಿಸುತ್ತಿದ್ದ ಎಂದು ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಉಸ್ಮಾನ್ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಆದರೆ ಆರೋಪಿ ಉಸ್ಮಾನ್‌ ನ್ಯಾಯಾಲಯಕ್ಕೆ ದಂಡ ಪಾವತಿಸದೆ ಸುಮಾರು 16 ವರ್ಷಗಳಿಂದ ತಲೆಮರೆಸಿಕೊಂಡಿದ್ದರಿಂದ ಆತನ ಬಂಧನಕ್ಕೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ ಪುತ್ತೂರು ನಗರ ಠಾಣಾ ಪೊಲೀಸರು ಎಸ್ಪಿ ಋಷಿಕೇಶ್ ಸೋನಾವಣೆ ಮತ್ತು ಡಿವೈಎಸ್ಪಿ ಡಾ|ವೀರಯ್ಯ ಹಿರೇಮಠ ಅವರ ನಿರ್ದೇಶನದಂತೆ, ಪುತ್ತೂರು ನಗರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್‌ ಕುಮಾರ್ ಅವರ ಮಾರ್ಗದರ್ಶನದಲ್ಲಿ ಎಸ್‌.ಐ ಶ್ರೀಕಾಂತ್ ರಾಥೋಡ್ ಅವರ ನೇತೃತ್ವದಲ್ಲಿ ಎ.ಎಸ್‌.ಐ ಚಂದ್ರ, ಹೆಡ್ ಕಾನ್‌ಸ್ಟೇಬಲ್ ಪರಮೇಶ್ವರ ಮತ್ತು ಸಿಬ್ಬಂದಿ ಕಿರಣ್ ಅವರು ಆರೋಪಿ ಉಸ್ಮಾನ್ ಅವರನ್ನು ಮಂಗಳೂರು ಬಲ್ಮಠದಲ್ಲಿ ಬಂಧಿಸಿದ್ದಾರೆ.

1.36 ಲಕ್ಷ ದಂಡ ಪಾವತಿ ಆರೋಪಿ ಬಿಡುಗಡೆ:

ಬಂಧಿತ ಆರೋಪಿ ಉಸ್ಮಾನ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಈ ವೇಳೆ ಆತ ನ್ಯಾಯಾಲಯದಲ್ಲಿ ರೂ.1,36,782 ದಂಡ ಪಾವತಿಸಿದ ಹಿನ್ನೆಲೆಯಲ್ಲಿ ಆತನ ಮೇಲಿದ ಪ್ರಕರಣ ರದ್ದು ಪಡಿಸಿ ಬಿಡುಗಡೆಗೊಳಿಸಲಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..