ನ್ಯೂಸ್ ಆ್ಯರೋ : ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ ಸಿನಿಮಾ ದೇಶಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಇದರ ಜೊತೆಗೆ ಈ ಸಿನಿಮಾದ ಬಗ್ಗೆ ಪರ-ವಿರೋಧ ಚರ್ಚೆಗಳು ಪ್ರಾರಂಭವಾಗಿದ್ದು, ಸಿನಿಮಾ ಮಾತ್ರ ತನ್ನ ಓಟ ನಿಲ್ಲಿಸಿಲ್ಲ.
ಈ ನಡುವೆ ನಟ ಚೇತನ್ ಭೂತ ಕೋಲ ಹಿಂದೂ ಸಂಸ್ಕೃತಿಯದ್ದಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಚೇತನ್ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಇದು ಸಂಘ ಪರಿವಾರದ ಕೆಂಗಣ್ಣಿಗೂ ಗುರಿಯಾಗಿತ್ತು.
ಇದೀಗ ಹಿಂದೂ ಜಾಗರಣ ವೇದಿಕೆ ಕಾರ್ಕಳ ಘಟಕವು ಕರಾವಳಿಯ ಹಿಂದೂಗಳ ಮನೆ ಮನೆಯಲ್ಲಿ ಅತ್ಯಂತ ಶೃದ್ಧಾ ಭಕ್ತಿಯಿಂದ ಆರಾಧಿಸುವ ಮತ್ತು ನಡೆಸುವ ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದೂ ಅಲ್ಲದೆ, ಹಿಂದೂ ಧರ್ಮೀಯರ ಭಾವನೆಗಳಿಗೆ ಪದೇ ಪದೇ ಧಕ್ಕೆ ತರುತ್ತಿರುವ ಕನ್ನಡ ನಟ ಚೇತನ್ ವಿರುದ್ದ ಕಾರ್ಕಳ ನಗರ ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದು, ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..