1. Home
  2. Mangaluru
  3. ಮಂಗಳೂರು : ನಿಷೇಧಿತ MDMA ಸಾಗಾಟ ಮತ್ತು ಮಾರಾಟ ಜಾಲ ಭೇದಿಸಿದ ಸಿಸಿಬಿ ಪೋಲಿಸರು – ಮೂವರು ಆರೋಪಿಗಳ ಬಂಧನ, ಸುಮಾರು ಏಳು ಲಕ್ಷ ಮೌಲ್ಯದ ಸೊತ್ತು ವಶಕ್ಕೆ

ಮಂಗಳೂರು : ನಿಷೇಧಿತ MDMA ಸಾಗಾಟ ಮತ್ತು ಮಾರಾಟ ಜಾಲ ಭೇದಿಸಿದ ಸಿಸಿಬಿ ಪೋಲಿಸರು – ಮೂವರು ಆರೋಪಿಗಳ ಬಂಧನ, ಸುಮಾರು ಏಳು ಲಕ್ಷ ಮೌಲ್ಯದ ಸೊತ್ತು ವಶಕ್ಕೆ

ಮಂಗಳೂರು : ನಿಷೇಧಿತ MDMA ಸಾಗಾಟ ಮತ್ತು ಮಾರಾಟ ಜಾಲ ಭೇದಿಸಿದ ಸಿಸಿಬಿ ಪೋಲಿಸರು – ಮೂವರು ಆರೋಪಿಗಳ ಬಂಧನ, ಸುಮಾರು ಏಳು ಲಕ್ಷ ಮೌಲ್ಯದ ಸೊತ್ತು ವಶಕ್ಕೆ
0

ನ್ಯೂಸ್ ಆ್ಯರೋ : ಮಾದಕ ವಸ್ತು MDMA ಅನ್ನು ಕಾರಿನಲ್ಲಿ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೋಲಿಸರು ಬಂಧಿಸಿದ್ದಾರೆ.

ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ವನ್ನು ಕೇರಳದ ಗಡಿಭಾಗದ ಮೂಲಕ ಕಾರೊಂದರಲ್ಲಿ ಮಂಗಳೂರು ನಗರಕ್ಕೆ ಮಾರಾಟ ಮಾಡಲು ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ಬಿ ರವರ ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ – ದೇವಿಪುರ ರಸ್ತೆಯ ತಚ್ಚಾಣಿ ಬಳಿ ಕಾರನ್ನು ತಪಾಸಣೆ ಮಾಡಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ‌.

ಬಂಧಿತ‌ ಆರೋಪಿಗಳನ್ನು 1.ಅಬ್ದುಲ್ ರೆಹಮಾನ್ ಅರ್ಪಾನ್ @ ಜಲ್ದಿ ಅರ್ಪಾನ್, ಪ್ರಾಯ(24), ವಾಸ: ಮೇಲಂಗಡಿ ಮನೆ, ದರ್ಗಾ ರಸ್ತೆ, ಉಳ್ಳಾಲ, 2. ಅಬ್ದುಲ್ ಜಲೀಲ್, ಪ್ರಾಯ(42), ವಾಸ: ಫ್ಲಾಟ್ ನಂಬ್ರ: 102, ಕುಮಾರ್ ವ್ಯೂ ಆಪಾರ್ಟ್ ಮೆಂಟ್, ಬೊಕ್ಕಪಟ್ಣ, ಬೋಳೂರು, ಮಂಗಳೂರು, 3.ಮೊಹಮ್ಮದ್ ಮನ್ಸೂರ್, ಪ್ರಾಯ(29), ವಾಸ: ಕಾಪಿಕಾಡ್ ಮನೆ, ಬೋಳಿಯಾರ್ ಗ್ರಾಮ, ಮಂಗಳೂರು ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳಿಂದ ಒಟ್ಟು 32 ಗ್ರಾಂ ತೂಕದ ರೂ. 1,62,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, 4 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನ, ನಗದು ರೂ. 22,000/- ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಇಗ್ನೀಸ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು, ನಗದು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರಿನ ಒಟ್ಟು ಮೌಲ್ಯ ರೂ 7,17,000/-ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ.

ಆರೋಪಿಗಳು ಅಕ್ರಮವಾಗಿ ಮಾದಕ ವಸ್ತುಗಳನ್ನು ಖರೀದಿಸಿಕೊಂಡು ದೇರಳಕಟ್ಟೆ, ಮುಡಿಪು, ನೆತ್ತಿಲಪದವು, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದು, ಈ ಮಾದಕ ವಸ್ತುಗಳ ಮಾರಾಟದಿಂದ ಅಕ್ರಮವಾಗಿ ಹಣ ಗಳಿಸಲು ತಲಪಾಡಿ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದರು ಎನ್ನಲಾಗಿದೆ.

ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ಪೈಕಿ ಅಬ್ದುಲ್ ರೆಹಮಾನ್ ಅರ್ಪಾನ್ @ ಜಲ್ದಿ ಅರ್ಪಾನ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ನಗರದ ಉಳ್ಳಾಲ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿದೆ. ಆರೋಪಿ ಅಬ್ದುಲ್ ಜಲೀಲ್ ಎಂಬಾತನ ವಿರುದ್ದ ಈ ಹಿಂದೆ 1999 ನೇ ಇಸವಿಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಆರೋಪಿ ಮೊಹಮ್ಮದ್ ಮನ್ಸೂರ್ ಎಂಬಾತನ ವಿರುದ್ಧ ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..