1. Home
  2. Mangaluru
  3. ಮಂಗಳೂರು : ಮಹೀಂದ್ರಾ XUV ಕಾರ್ ನಲ್ಲಿ 132 ಕೆಜಿ ಅಕ್ರಮ ಗಾಂಜಾ ಸಾಗಾಟ – ಇಬ್ಬರು ಆರೋಪಿಗಳ ಬಂಧನ, 39 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶಕ್ಕೆ…

ಮಂಗಳೂರು : ಮಹೀಂದ್ರಾ XUV ಕಾರ್ ನಲ್ಲಿ 132 ಕೆಜಿ ಅಕ್ರಮ ಗಾಂಜಾ ಸಾಗಾಟ – ಇಬ್ಬರು ಆರೋಪಿಗಳ ಬಂಧನ, 39 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶಕ್ಕೆ…

ಮಂಗಳೂರು : ಮಹೀಂದ್ರಾ XUV ಕಾರ್ ನಲ್ಲಿ 132 ಕೆಜಿ ಅಕ್ರಮ ಗಾಂಜಾ ಸಾಗಾಟ – ಇಬ್ಬರು ಆರೋಪಿಗಳ ಬಂಧನ, 39 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶಕ್ಕೆ…
0

ನ್ಯೂಸ್ ಆ್ಯರೋ : ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ, ಬೆಂಗಳೂರಿಗೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ XUV 500 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 132 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತ ಆರೋಪಿಗಳನ್ನು ರಮೀಝ್ ರಾಝ್ (ಪ್ರಾಯ 30 ), ವಾಸ : ಡೋರ್ ನಂಬ್ರ : 2-392 , ತೌಡುಗೋಳಿ ಕ್ರಾಸ್ , ನರಿಂಗಾನ ಗ್ರಾಮ, ಬಂಟ್ವಾಳ ತಾಲೂಕು ಮತ್ತು ಅಬ್ದುಲ್ ಖಾದರ್ ಹ್ಯಾರಿನ್ , (ಪ್ರಾಯ31 ) , ವಾಸ ಜೀಲಾನಿ ಮಂಝಿಲ್ , ಮದಂಗಳ ಕಟ್ಟ ಮೀಯಪದವು , ಮಂಜೇಶ್ವರ , ಕಾಸರಗೋಡು ಜಿಲ್ಲೆ , ಕೇರಳ ರಾಜ್ಯ ಎಂದು ಗುರುತಿಸಲಾಗಿದೆ.

ಪ್ರಕರಣದ ವಿವರ :

ದಿನಾಂಕ 17-11- 2022 ರಂದು ಮಂಗಳೂರು ನಗರಕ್ಕೆ ವಿಶಾಖಪಟ್ಟಣದಿಂದ ಮಹೇಂದ್ರ XUV 500 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್‌, ಪಿಎಸ್‌ಐ ರಾಜೇಂದ್ರ ನೇತೃತ್ವದ ಸಿಸಿಬಿ ಪೊಲೀಸರು ಮುಡಿಪು ಕುರ್ನಾಡು ಗ್ರಾಮದ ಕಾಯರ್ ಗೋಳಿ ಎಂಬಲ್ಲಿ ಪತ್ತೆ ಹಚ್ಚಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದುಕೊಂಡು ಆರೋಪಿಗಳ ವಶದಲ್ಲಿದ್ದ ಬಿಳಿ ಬಣ್ಣದ ಮಹೇಂದ್ರ XLIV , 500 ಕಾರು ನಂಬ್ರ : ಕೆಎಲ್ – 14-4-7775 ಅನ್ನು ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ 132 ಕೆಜಿ ಗಾಂಜಾವನ್ನು, 2 ಮೊಬೈಲ್ ಫೋನ್ ಗಳನ್ನು, 3 ತಲವಾರುಗಳನ್ನು, ರೂಪಾಯಿ 2,180/- ನಗದು ರೂ ವಶಪಡಿಸಿಕೊಳ್ಳಲಾಗಿದೆ.

ವಶಕ್ಕೆ ಪಡೆದ ಗಾಂಜಾ, ಮಹೇಂದ್ರ XUV 500 ಕಾರು, ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ ರೂ , 39,15,000/- ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳು ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದರು. ಈ ಅಕ್ರಮ ಗಾಂಜಾ ಸಾಗಾಟದ ಸಮಯದಲ್ಲಿ ಪೊಲೀಸರು ಅಥವಾ ಸಾರ್ವಜನಿಕರು ನಿಲ್ಲಿಸಿದ್ದಲ್ಲಿ ಅವರಿಗೆ ತೊಂದರೆ ನೀಡುವ ಉದ್ದೇಶದಿಂದ ತಲವಾರುಗಳನ್ನು ಕಾರಿನಲ್ಲಿ ಇರಿಸಿದ್ದರು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳ ಪೈಕಿ ರಮೀಝ್ ರಾಝ್ ಎಂಬಾತನ ವಿರುದ್ಧ ಈ ಹಿಂದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಪಟ್ಟಂತೆ ಒಂದು ಪ್ರಕರಣ, ಗಾಂಜಾ ಮಾರಾಟ ಮಾಡಿದ ಪ್ರಕರಣ, ಹಲ್ಲೆ ಪ್ರಕರಣ ಹೀಗೆ ಒಟ್ಟು 3 ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟದ ಒಂದು ಪ್ರಕರಣ ಹೀಗೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ.

ಇನ್ನೋರ್ವ ಆರೋಪಿ ಅಬ್ದುಲ್ ಖಾದರ್‌ ಹ್ಯಾರಿಸ್ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ದಾಖಲಾಗಿರುತ್ತದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..