1. Home
  2. Mangaluru
  3. ತೇಲುವ ಹಡಗಿನಲ್ಲಿ ಕನ್ನಡದ ಕಂಪು ಬೀರಿದ ಕೋಟಿ ಕಂಠ ಗಾಯನ – 67ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದ ಕರಾವಳಿ

ತೇಲುವ ಹಡಗಿನಲ್ಲಿ ಕನ್ನಡದ ಕಂಪು ಬೀರಿದ ಕೋಟಿ ಕಂಠ ಗಾಯನ – 67ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದ ಕರಾವಳಿ

ತೇಲುವ ಹಡಗಿನಲ್ಲಿ ಕನ್ನಡದ ಕಂಪು ಬೀರಿದ ಕೋಟಿ ಕಂಠ ಗಾಯನ – 67ನೇ ಕನ್ನಡ ರಾಜ್ಯೋತ್ಸವದ  ಸಂಭ್ರಮಕ್ಕೆ ಸಾಕ್ಷಿಯಾದ ಕರಾವಳಿ
0

ನ್ಯೂಸ್ ಆ್ಯರೋ : 67ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ನಾಡು-ನುಡಿಯ ಹಿರಿಮೆ ಸಾರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ನಗರದ ಪಣಂಬೂರು ಕಡಲ ಕಿನಾರೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರ ನೇತೃತ್ವದಲ್ಲಿ ಗೀತ ಗಾಯನ ಕಾರ್ಯಕ್ರಮ ಕನ್ನಡದ ಕಂಪನ್ನು ಚೆಲ್ಲಿತ್ತು.

ಈ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ ಅಂಬೆಕಲ್ಲು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಾಣಿಕ್ಯ, ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿ ವಿವಿಧ ಇಲಾಖೆಗಳ ಅಧಿಕಾರಿಗಳು, ಹಲವಾರು ಶಾಲಾ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು, ಶಿಕ್ಷಕ-ಶಿಕ್ಷಕಿಯರು ಭಾಗವಹಿಸಿದ್ದರು.

ಕವಿ ಕುವೆಂಪು ಅವರ ನಾಡಗೀತೆ ಮೂಲಕ ಕೋಟಿ ಕಂಠ ಗಾಯನವನ್ನು ಪ್ರಾರಂಭಿಸಲಾಯಿತು. ನಂತರ ಕ್ರಮವಾಗಿ ಹುಯಿಲಗೊಳ ನಾರಾಯಣ್ ರಾವ್ ಅವರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ಅವರ ರಚನೆಯ ಬಾರಿಸು ಕನ್ನಡ ಡಿಂಡಿಮವ, ಡಿ.ಎಸ್ ಕರ್ಕಿ ಅವರ ಹಚ್ಚೇವು ಕನ್ನಡದ ದೀಪ, ಚೆನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾಚೇತನ ಹಾಗೂ ಕೊನೆಯಲ್ಲಿ ಹಂಸಲೇಖ ರಚನೆಯ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡನ್ನು ಹಾಡುವ ಮೂಲಕ ಕೋಟಿ ಕಂಠ ಗಾಯನವನ್ನು ಯಶಸ್ವಿಗೊಳಿಸಲಾಯಿತು.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..