ನ್ಯೂಸ್ ಆ್ಯರೋ : ಗಿರಿಗಿಟ್ ಚಿತ್ರದ ಮೂಲಕ ತುಳು ಚಿತ್ರರಂಗದಲ್ಲಿ ಯಶಸ್ಸು ಕಂಡ ನಟ, ಹಾಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಅವರಿಗೆ ಬೆದರಿಕೆ ಮತ್ತು ಅವಾಚ್ಯ ನಿಂದನೆಯ ಕಾಮೆಂಟ್ ಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ರೂಪೇಶ್ ಶೆಟ್ಟಿ ಅವರು ಸದ್ಯ ನಡೆಯುತ್ತಿರುವ ಬಿಗ್ ಬಾಸ್ ಶೋ ನಲ್ಲಿ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಒಡ್ಡಿರುವ ಹಾಗೂ ಅವಾಚ್ಯ ಶಬ್ದಗಳಿಂದ ಕಿಡಿಗೇಡಿಗಳು ನಿಂದಿಸಿರುವ ಬಗ್ಗೆ ಮಂಗಳೂರು ಕಮೀಷನರ್ ಶಶಿಕುಮಾರ್ ಅವರಿಗೆ ಕುಟುಂಬಸ್ಥರಿಂದ ದೂರು ನೀಡಲಾಗಿದ್ದು, ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ
ಈ ಬಗ್ಗೆ ಮಾಹಿತಿ ನೀಡಿರುವ ಕಮೀಷನರ್ ಶಶಿಕುಮಾರ್ ಅವರು ರೂಪೇಶ್ ಶೆಟ್ಟಿ ಬಿಗ್ ಬಾಸ್ ನಲ್ಲಿ ನೀಡಿರುವ ಹೇಳಿಕೆಗಳನ್ನು ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಒಡ್ಡಿರುವ ಹಾಗೂ ಅವಾಚ್ಯ ಶಬ್ದಗಳಿಂದ ಕಿಡಿಗೇಡಿಗಳು ನಿಂದಿಸಿರುವ ಬಗ್ಗೆ ನಮಗೆ ದೂರು ಬಂದಿದೆ.
ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ NC ದಾಖಲಿಸಿಕೊಳ್ಳಲಾಗಿದ್ದು, ಅಲ್ಲದೇ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..