ನ್ಯೂಸ್ ಆ್ಯರೋ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರ್ ಹಿಂಬಾಲಿಸಿ ಕೊಲೆ ಬೆದರಿಕೆ ಒಡ್ಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರಿಯಾಝ್ ತಂದೆ ಅಬ್ದುಲ್ ಖಾದರ್, ಪ್ರಾಯ-38 ವರ್ಷ, ಫಳ್ನೀರ್, ಮಂಗಳೂರು ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಭಾಗಿಯಾಗಿತ್ತು ಎನ್ನಲಾದ ಸ್ಕಾರ್ಪಿಯೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ದೂರುದಾರರಾದ ಶಾಸಕರ ಚಾಲಕ ನವೀನ್ ಅವರು ಆರೋಪಿ ಮತ್ತು ವಾಹನವನ್ನು ಗುರುತಿಸಿದ್ದಾರೆ. ಓವರ್ ಟೇಕ್ ವಿಚಾರವಾಗಿ ಗೊಂದಲ ನಿರ್ಮಾಣವಾಗಿದೆ.
ಅಲ್ಲದೇ ಆರೋಪಿಯ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ದಾಖಲಾಗಿಲ್ಲ ಮತ್ತು ಆತನ ಬಳಿ ಯಾವುದೇ ಆಯುಧ ಪತ್ತೆಯಾಗಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..