ನ್ಯೂಸ್ ಆ್ಯರೋ : ತಹಶೀಲ್ದಾರ್ ಅವರ ಸಹಾಯಕ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಮಂಗಳೂರಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮಂಗಳೂರು ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಹಶೀಲ್ದಾರ್ ಸಹಾಯಕ ಅಧಿಕಾರಿ ಶಿವಾನಂದ ಎಂಬಾತ ಎನ್‌ಒಸಿ ಮಾಡಿಸಿಕೊಡಲು ಸಾರ್ವಜನಿಕರೊಬ್ಬರಿಂದ ಲಂಚ ಕೇಳಿದ್ದ.
ಅದರಂತೆ ಅವರು ಇಂದು ಮಧ್ಯಾಹ್ನ 4700 ರೂ. ತೆಗೆದುಕೊಂಡು ಬಂದಿದ್ದರು. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಆತ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.
ಲೋಕಾಯುಕ್ತ ಎಸ್ಪಿ ಲಕ್ಷ್ಮಿ ಗಣೇಶ್ ಹಾಗೂ ಡಿವೈಎಸ್‌ಪಿ ಚೆಲುವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಎಸಿಬಿ ರದ್ದುಗೊಂಡು ಲೋಕಾಯುಕ್ತಕ್ಕೆ ಮರಳಿ ಅಧಿಕಾರ ದೊರಕಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಪ್ರಕರಣ ಇದಾಗಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..