1. Home
  2. Mangaluru
  3. ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಎನ್‌ಐಎಗೆ ಹಸ್ತಾಂತರ

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಎನ್‌ಐಎಗೆ ಹಸ್ತಾಂತರ

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಎನ್‌ಐಎಗೆ ಹಸ್ತಾಂತರ
0

ನ್ಯೂಸ್ ಆ್ಯರೋ: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಂಕನಾಡಿ ಸಮೀಪ, ಇತ್ತೀಚೆಗೆ ನಡೆದ ಕುಕ್ಕರ್ ಸ್ಪೋಟ ಘಟನೆಗೆ ಸಂಬಂಧಿಸಿದಂತೆ, ಮುಂದಿನ ತನಿಖೆಯನ್ನು, ಕೇಂದ್ರ ತನಿಖಾ ಸಂಸ್ಥೆ ಎನ್‌ಐಎಗೆ ವರ್ಗಾಯಿಸಲು ರಾಜ್ಯ ಸರಕಾರ ನಿರ್ಧರಿಸಿ ಆಜ್ಞೆ ಹೊರಡಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ಪ್ರಾಥಮಿಕ ತನಿಖೆ ಯಲ್ಲಿ, ಸಂಗ್ರಹಿಸಲಾದ, ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ, ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ.

ಪ್ರಕರಣ ಹಿನ್ನೆಲೆ:

ನವೆಂಬರ್ 19ರಂದು ಸಂಜೆ 4.40ರಲ್ಲಿ ಸುಮಾರಿಗೆ ನಾಗೂರಿಯಿಂದ ಪಂಪ್‌ವೆಲ್‌ಗೆ ಪ್ರಯಾಣಿಕರೊಬ್ಬರನ್ನು ಕುಳ್ಳಿರಿಸಿಕೊಂಡು ಸಾಗುತ್ತಿದ್ದ ರಿಕ್ಷಾದಲ್ಲಿ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಪ್ರಯಾಣಿಕ, ಆಟೋ ಚಾಲಕನಿಗೆ ಗಾಯಗಳಾಗಿವೆ. ಇನ್ನೂ ಸ್ಫೋಟಕ ಹಿಡಿದುಕೊಂಡು ಪ್ರಯಾಣಿಸುತ್ತಿದ್ದ ಆರೋಪಿ ಬಳಿ ಪ್ರೇಮರಾಜ್​ ಎಂಬ ಹೆಸರಿನ ಐಡಿ ಸಿಕ್ಕಿತ್ತು. ಈ ಆರೋಪಿಯು ಮೈಸೂರಿನಿಂದ ಮಂಗಳೂರಿಗೆ ಬಂದಿದ್ದು, ನಕಲಿ ಆಧಾರ್‌ ಕಾರ್ಡ್‌ನ್ನು ಬಳಸುತ್ತಿದ್ದ. ಈಗಾಗಲೇ ಈತನ ವಿರುದ್ಧ ಮಂಗಳೂರಿನ ಪೂರ್ವ ಮತ್ತು ಉತ್ತರ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಾಗುರಿಯಲ್ಲಿ ಇಳಿದು ರಿಕ್ಷಾದ ಮುಖಾಂತರ ಟಾರ್ಗೆಟ್ ಜಾಗಕ್ಕೆ ತೆರಳುತ್ತಿದ್ದಾಗ ಜಂಪ್‌ನಲ್ಲಿ ಬಾಂಬ್ ಸ್ಟೋಟಗೊಂಡಿದೆ. ಆದರೆ, ಇತನ ಟಾರ್ಗೆಟ್ ಜಾಗ ಯಾವುದಾಗಿತ್ತು ಎಂಬುದು ಇನ್ನೂ ತನಿಖೆಯಲ್ಲಿ ತಿಳಿದುಬರಬೇಕಿದೆ.