ನ್ಯೂಸ್ ಆ್ಯರೋ : ಮಂಗಳೂರು ನಗರ ಕಮೀಷನರೇಟ್ ನ ಸುರತ್ಕಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಈಗಾಗಲೇ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನಗಳ ಪೋಲಿಸ್ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಮೂವರು ಬಂಧಿತರಲ್ಲಿ ಇಬ್ಬರು ಕೊಲೆಯಲ್ಲಿ ನೇರ ಭಾಗಿಯಾಗಿದ್ದು, ಇನ್ನೋರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ. ಗುರುತು ಪತ್ತೆ ಆಗುವವರೆಗೂ ಆರೋಪಿಗಳ ಮಾಹಿತಿ ಹೇಳಲು ಆಗಲ್ಲ. ನಿನ್ನೆ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ವಿಚಾರಣೆ ಮಾಡಲಾಗುತ್ತದೆ. ಕೊಲೆಗೆ ಕಾರಣ ಏನು ಅನ್ನುವುದನ್ನು ಪೂರ್ಣ ತನಿಖೆ ಬಳಿಕ ಹೇಳಲಾಗುವುದು.
ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಪ್ರಕರಣಗಳ ಆರೋಪಿಗಳು. 2021ರಲ್ಲಿ ನಡೆದ ಕೊಲೆ ಯತ್ನ ಕೇಸ್ ವೊಂದರಲ್ಲೂ ಅವರು ಇದ್ದರು. ಜಲೀಲ್ ಕೇಸ್ ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನ ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ ಎಂದು ಕಮೀಷನರ್ ಮಾಹಿತಿ ನೀಡಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..