ನ್ಯೂಸ್ ಆ್ಯರೋ : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಎನ್ಐಎ ಗೆ ವಹಿಸಲಾಗಿದ್ದು, ಪ್ರಕರಣದ ಸಂಪೂರ್ಣ ತನಿಖೆಯ ಬಳಿಕ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ವಿವರ ಬೆಳಕಿಗೆ ಬರಲಿದೆ.
ಬಾಂಬ್ ಸ್ಫೋಟ ಪ್ರಕರಣವನ್ನು ಎನ್ಐಎ ಗೆ ವಹಿಸಿರುವುದನ್ನು ಸ್ವತಃ ಮಂಗಳೂರು ನಗರ ಪೋಲಿಸ್ ಕಮೀಷನರ್ ಎನ್.ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.
ಘಟನೆಯಲ್ಲಿ 40-45 ಶೇಕಡಾ ಗಂಭೀರ ಗಾಯಗೊಂಡಿರುವ ಶಂಕಿತ ಉಗ್ರ ಮಹಮ್ಮದ್ ಶಾರೀಕ್ ನನ್ನು ಪೋಲಿಸರು ಇನ್ನೂ ಪೂರ್ಣ ವಿಚಾರಣೆಗೆ ಒಳಪಡಿಸಿಲ್ಲ. ಆದರೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ಎನ್ಐಎ ಗೆ ವಹಿಸಲಾಗಿದೆ ಎನ್ನಲಾಗುತ್ತಿದೆ.
ಗಾಯಗೊಂಡಿದ್ದ ಶಾರೀಕ್ ಪ್ರಾಣಾಪಾಯದಿಂದ ಪಾರಾಗಿದ್ದು, ಸುಟ್ಟ ಗಾಯಗಳಾಗಿದ್ದು, ಇನ್ಫೆಕ್ಷನ್ ಆಗುವ ಸಂಭವ ಇರುವುದರಿಂದ ವೈದ್ಯರ ಹೊರತಾಗಿ ಯಾರಿಗೂ ಶಾರೀಕ್ ನನ್ನು ಭೇಟಿ ಮಾಡಲು ಪೋಲಿಸರು ಅವಕಾಶ ನೀಡಿಲ್ಲ. ಅಲ್ಲದೇ ಶಾರೀಕ್ ಗೆ ಪ್ರಾಣಾಪಾಯ ಇರುವ ಸಾಧ್ಯತೆ ಇರುವುದರಿಂದ ಶಾರೀಕ್ ದಾಖಲಾಗಿರುವ ಆಸ್ಪತ್ರೆಯ ಸುತ್ತಲೂ ಬಿಗಿ ಪೋಲಿಸ್ ಬಂದೋಬಸ್ತ್ ಆಯೋಜನೆ ಮಾಡಲಾಗಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..