ನ್ಯೂಸ್ ಆ್ಯರೋ : ಮಂಗಳೂರು ನಗರದ ಹೊರವಲಯದಲ್ಲಿರುವ ವಾಮಂಜೂರ್ ಜಂಕ್ಷನ್ ನಲ್ಲಿ ಶಾರದೋತ್ಸವ ಮತ್ತು ಫ್ರೆಂಡ್ಸ್ ಹುಲಿಯ ಪ್ರಚಾರಾರ್ಥವಾಗಿ ಹಾಕಲಾಗಿದ್ದ ಹಲವು ಬ್ಯಾನರ್‌ಗಳನ್ನು ದುಷ್ಕರ್ಮಿಗಳು ಕಳೆದ ತಡರಾತ್ರಿ ಹರಿದು ಹಾಕಿರುವ ಘಟನೆ ನಡೆದಿದೆ.
ಕಳೆದ ತಡರಾತ್ರಿ 1 : 30 ರಿಂದ 2 ರ ನಡುವೆ ಈ ಕೃತ್ಯ ನಡೆದಿದ್ದು ದುಷ್ಕರ್ಮಿಗಳ ಕೃತ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ವೈಭವೋಪೇತವಾಗಿ ಪ್ರತಿವರ್ಷ ಜರಗುವ ವಾಮಂಜೂರಿನ ಶಾರದೋತ್ಸವ ಈ ಬಾರಿಯೂ ಸಾಂಗವಾಗಿ ನೆರವೇರಿದ್ದು, ಇದರ ಬೆನ್ನಲ್ಲೇ ಕಿಡಿಗೇಡಿಗಳು ತಮ್ಮ ನೂಚ ಕೃತ್ಯ ಮೆರೆದಿದ್ದಾರೆ. ಅಲ್ಲದೇ ಸ್ಥಳೀಯ ಯುವಕರ ತಂಡವೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಘಟನೆಗೆ ಸಂಬಂಧಿಸಿದಂತೆ ವಾಮಂಜೂರು ಹುಲಿ ತಂಡದಿಂದ ಮಂಗಳೂರು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದ್ದು, ಕಿಡಿಗೇಡಿ ಕೃತ್ಯ ಎಸಗಿದವರನ್ನು ಬಂಧಿಸುವಂತೆ ಮನವಿ ಮಾಡಲಾಗಿದೆ. ಅಲ್ಲದೇ ಇಂತಹ ಕೃತ್ಯ ಒಪ್ಪುವಂತದ್ದಲ್ಲ, ತಪ್ಪು ಯಾರೇ ಮಾಡಿದ್ದರೂ ಕಾನೂನಿನ ಅಡಿಯಲ್ಲಿ ಅವರಿಗೆ ತಕ್ಕ ಶಿಕ್ಷೆಯಾಗಲೇಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..