ನ್ಯೂಸ್ ಆ್ಯರೋ : ಕಾರ್ಕಳದಿಂದ ಮಂಗಳೂರಿಗೆ ಬರುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯ ಜೊತೆಗಿದ್ದ ವಿಚಾರವಾಗಿ ಯುವಕನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಯುವತಿ ಹಾಗೂ ಯುವಕನ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಇಮ್ರಾನ್ ಖಾನ್ ಎಂಬವರು ಟ್ವಿಟರ್ ನಲ್ಲಿ ಈ ಬಗ್ಗೆ ಫೋಟೋ ಸಹಿತ ಮಾಹಿತಿ ಹಂಚಿಕೊಂಡಿದ್ದರು.
ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಎಡಿಜಿಪಿ ಅಲೋಕ್ ಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..