ನ್ಯೂಸ್ ಆ್ಯರೋ : ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ಇದುವರೆಗೆ ಆಯುಕ್ತರಾಗಿದ್ದ ಎನ್.ಶಶಿ ಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ಗುರುವಾರ ವರ್ಗಾವಣೆ ಮಾಡಲಾಗಿತ್ತು. ಹಾಗೆಯೇ ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದ ಕುಲದೀಪ್ ಜೈನ್ ಅವರನ್ನು ಮಂಗಳೂರಿಗೆ ಕಮೀಷನರ್ ಆಗಿ ವರ್ಗಾವಣೆ ಮಾಡಲಾಗಿತ್ತು.
ಇಂದು ಅಧಿಕಾರ ಸ್ವೀಕರಿಸಿ ಮಾತನಾಡಿದ ಕುಲದೀಪ್ ಕುಮಾರ್ ಜೈನ್, ಭ್ರಷ್ಟಾಚಾರ ಸಹಿಸುವುದಿಲ್ಲ. ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು. ಎಲ್ಲ ರೀತಿಯ ಅಕ್ರಮ ಚಟುವಟಿಕೆ ತಡೆಗೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಎಲ್ಲರ ಸಹಕಾರದಿಂದ ಜನರಿಗೆ ಅನುಕೂಲಕರವಾಗಿ ಕಾರ್ಯನಿರ್ವಹಿಸುತ್ತೇವೆ ಎಂದಿದ್ದಾರೆ.
ಕುಲದೀಪ್ ಕುಮಾರ್ ಜೈನ್ ಅವರು ಮೂಲತಃ ತಮಿಳುನಾಡಿನ ಚೆನ್ನೈ ಮೂಲದವರಾಗಿದ್ದು, ಕರ್ನಾಟಕ ಕೇಡರ್ ನ 2011ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರೊಬೇಶನರಿ ಮುಗಿಸಿದ್ದು, ಬಳಿಕ ಹಲವು ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿ ಮತ್ತೆ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಟ್ಟಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..