1. Home
  2. Mangaluru
  3. ಕೊಲೆಯಾಗಿದ್ದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಸರ್ಕಾರಿ ಕೆಲಸಕ್ಕೆ ಹಾಜರು – ದ.ಕ ಡಿಸಿ ಕಚೇರಿಯಲ್ಲಿಯೇ ಉದ್ಯೋಗ, ಫಲ ನೀಡಿದ ಕಟೀಲ್ ಬೇಡಿಕೆ

ಕೊಲೆಯಾಗಿದ್ದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಸರ್ಕಾರಿ ಕೆಲಸಕ್ಕೆ ಹಾಜರು – ದ.ಕ ಡಿಸಿ ಕಚೇರಿಯಲ್ಲಿಯೇ ಉದ್ಯೋಗ, ಫಲ ನೀಡಿದ ಕಟೀಲ್ ಬೇಡಿಕೆ

ಕೊಲೆಯಾಗಿದ್ದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಸರ್ಕಾರಿ ಕೆಲಸಕ್ಕೆ ಹಾಜರು – ದ.ಕ ಡಿಸಿ ಕಚೇರಿಯಲ್ಲಿಯೇ ಉದ್ಯೋಗ, ಫಲ ನೀಡಿದ ಕಟೀಲ್ ಬೇಡಿಕೆ
0

ನ್ಯೂಸ್ ಆ್ಯರೋ : ಕೆಲ ತಿಂಗಳ ಹಿಂದೆ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಬಿಜೆಪಿಯ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ತನ್ನ ಕರ್ತವ್ಯಕ್ಕೆ ಹಾಜರಾಗಿ ತನ್ನ ನೂತನ ವೃತ್ತಿಯನ್ನು ಆರಂಭಿಸಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಅವರು ಸ್ವೀಕರಿಸಿದರು. ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ.

ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ‘ಸಿ’ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ, ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡಿದ್ದರು‌‌.

ಇದರ ನಡುವೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸಿಎಂ ಅವರಿಗೆ ನೂತನ ಅವರ ಬೇಡಿಕೆಯ ಬಗ್ಗೆ ವಿವರಣೆ ನೀಡಿದ್ದು, ಇದೀಗ ನೂತನ ಅವರ ಬೇಡಿಕೆಯಂತೆ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..