1. Home
  2. Mangaluru
  3. ಮಂಗಳೂರು : ಆಸ್ಪತ್ರೆಯ ಮಹಿಳಾ ಕೋಣೆಯಲ್ಲಿ ರಹಸ್ಯ ಕ್ಯಾಮೆರಾ ಇಟ್ಟ ನರ್ಸಿಂಗ್ ವಿದ್ಯಾರ್ಥಿ – ಪೋಲಿಸರಿಗೆ ದೂರು, ಆರೋಪಿಯ ಬಂಧನ

ಮಂಗಳೂರು : ಆಸ್ಪತ್ರೆಯ ಮಹಿಳಾ ಕೋಣೆಯಲ್ಲಿ ರಹಸ್ಯ ಕ್ಯಾಮೆರಾ ಇಟ್ಟ ನರ್ಸಿಂಗ್ ವಿದ್ಯಾರ್ಥಿ – ಪೋಲಿಸರಿಗೆ ದೂರು, ಆರೋಪಿಯ ಬಂಧನ

ಮಂಗಳೂರು : ಆಸ್ಪತ್ರೆಯ ಮಹಿಳಾ ಕೋಣೆಯಲ್ಲಿ ರಹಸ್ಯ ಕ್ಯಾಮೆರಾ ಇಟ್ಟ ನರ್ಸಿಂಗ್ ವಿದ್ಯಾರ್ಥಿ – ಪೋಲಿಸರಿಗೆ ದೂರು, ಆರೋಪಿಯ ಬಂಧನ
0

ನ್ಯೂಸ್ ಆ್ಯರೋ : ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್‌ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.



ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್‌ ವಿದ್ಯಾರ್ಥಿ ಪವನ್‌ ಈ ಕೃತ್ಯವೆಸಗಿದ ಆರೋಪಿ. ಮೂಲತಃ ಕಲಬುರಗಿಯವನಾದ ಪವನ್‌ ಬಜಪೆಯಲ್ಲಿ ವಾಸವಿದ್ದ.



ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಕ್ಯಾನಿಂಗ್‌ಗೆ ಒಳಗಾಗುವ ಮುನ್ನ ಬಟ್ಟೆ ಬದಲಾಯಿಸಬೇಕಾಗುತ್ತದೆ. ಪವನ್‌ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ.



ಸ್ಕ್ಯಾನಿಂಗ್‌ಗೆ ಒಳಗಾಗಲು ಬಂದಿದ್ದ ಯುವತಿಯೊಬ್ಬರು ಉಡುಪು ಬದಲಾಯಿಸುವ ಮೊದಲು ಕೊಠಡಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಮೂಲೆಯಲ್ಲಿ ರಹಸ್ಯ ಕ್ಯಮರಾ ಇರುವುದು ಪತ್ತೆಯಾಗಿದೆ.



ಕೂಡಲೇ ಅವರು ಈ ವಿಷಯವನ್ನು ವೈದ್ಯರ ಗಮನಕ್ಕೆ ತಂದಿದ್ದಾರೆ. ತನಿಖೆ ನಡೆಸಿದಾಗ ಪವನ್‌ ಕುಮಾರ್‌ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದೆ. ಸುರತ್ಕಲ್‌ ಠಾಣೆಗೆ ಅವನ ವಿರುದ್ಧ ದೂರು ನೀಡಲಾಗಿದ್ದು, ಆತನನ್ನು ಬಂಧಿಸಲಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..