ನ್ಯೂಸ್ ಆ್ಯರೋ : ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರಿಗೆ ಪ್ಯಾಂಟ್ ನ ಜಿಪ್ ತೆರೆದು ಜನನಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ ಕ್ಲೀನರ್ ನನ್ನು ಉಳ್ಳಾಲ ಪೋಲಿಸರು ಬಂಧಿಸಿದ್ದಾರೆ.
ಬಜ್ಪೆ ಕೆಂಜೂರು ನಿವಾಸಿ ಬಸ್ ಕ್ಲೀನರ್ ಮಹಮ್ಮದ್ ಇಮ್ರಾನ್ (26) ಬಂಧಿತ ಆರೋಪಿ.
ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯದಲ್ಲಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು.
ಇಂದು ಮುಂಜಾನೆ ಆ ಬಸ್ ಉಳ್ಳಾಲ ಠಾಣಾ ವ್ಯಾಪ್ತಿಗೆ ತಲುಪಿದಾಗ ಬಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಎಂಬಾತ ಅಸಭ್ಯವಾಗಿ ವರ್ತಿಸಿದ್ದ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಮಹಿಳಾ ವೈದ್ಯೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಉಳ್ಳಾಲ ಪೊಲೀಸರು ಆರೋಪಿ ಮಹಮ್ಮದ್ ಇಮ್ರಾನ್ ಎಂಬಾತನನ್ನು ಬಂಧಿಸಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..