ನ್ಯೂಸ್ ಆ್ಯರೋ : ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಶುಕ್ರವಾರ ಶಾಲೆಗೆ ರಜೆ ಇದ್ದ ಕಾರಣ ನಾಲ್ಕು ಮಂದಿ ಗೆಳೆಯರು ಸಂಜೆಯ ವೇಳೆಗೆ ಬ್ರಹ್ಮರಕೂಟ್ಲು ಬಂಟರ ಭವನದ ಬಳಿ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದರು. ಈಜುತ್ತಿದ್ದ ವೇಳೆ ಸಲ್ಮಾನ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಮೃತ ಸಲ್ಮಾನ್ ಬಿ.ಸಿ.ರೋಡ್ ಕೈಕಂಬದ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಯಾಗಿದ್ದಾನೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..