ನ್ಯೂಸ್ ಆ್ಯರೋ : ಮನೆಯೊಂದರಲ್ಲಿ ವ್ಯಕ್ತಿಯೋರ್ವ ನಿಗೂಢವಾಗಿ ಸಾವನ್ನಪ್ಪಿದ್ದು ನಾಲ್ಕು ದಿನಗಳ ಬಳಿಕ ಪೊಲೀಸರಿಗೆ ಮಾಹಿತಿ ತಿಳಿದು ಮೃತದೇಹವನ್ನು ತೆರವುಗೊಳಿಸಿದ ಘಟನೆ ಮುಲ್ಕಿಯ ಕಿಲ್ಪಾಡಿ ಮದಕ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಸ್ಥಳಿಯ ನಿವಾಸಿ ಸುಧೀರ್ ಶೆಟ್ಟಿ (45) ಎಂದು ಗುರುತಿಸಲಾಗಿದೆ.
ಮೃತ ಸುಧೀರ್ ಶೆಟ್ಟಿ ಎಸ್ ಇ ಝೆಡ್ ನಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದು ಪತ್ನಿಯೊಂದಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಮೃತ ಸುಧೀರ್ ಶೆಟ್ಟಿ ಮದ್ಯ ವ್ಯಸನಿಯಾಗಿದ್ದು ಕೆಲ ಸಮಯದ ಹಿಂದೆ ಪತ್ನಿ ಜೊತೆ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿದ್ದು ಪತ್ನಿ ತವರು ಮನೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಸುಧೀರ್ ಶೆಟ್ಟಿ ನಾಪತ್ತೆಯಾಗಿರುವುದನ್ನು ಗಮನಿಸಿ ಸಂಬಂಧಿಕರು ಫೋನ್ ಮೂಲಕ ಸಂಪರ್ಕಿಸಲು ಯತ್ನಿಸಿ ವಿಫಲಗೊಂಡಿದ್ದರು.
ಮನೆಗೆ ಬಂದು ಮಂಗಳವಾರ ಸಂಜೆ ವೇಳೆ ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿ ಸುಧೀರ್ ಶೆಟ್ಟಿ ಶವ ಪತ್ತೆಯಾಗಿದೆ. ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..